ಯಡಿಯೂರಪ್ಪಗೆ ಮತ್ತೆ ರಾಜ್ಯ ಬಿಜೆಪಿ ಸಾರಥ್ಯ?
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಬಿಜೆಪಿ ಸಾರಥ್ಯ ನೀಡುವ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಬಿಜೆಪಿ ಸಾರಥ್ಯ ನೀಡುವ ಪ್ರಕ್ರಿಯೆಗೆ ಮತ್ತೆ ಚಾಲನೆ ಸಿಕ್ಕಿದೆ. ಕೇಶವ ಕೃಪಾದಲ್ಲಿ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ವಿಧಾನಮಂಡಲ ಪ್ರತಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಅವರು ಆರ್ಎಸ್ಎಸ್ ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಪಕ್ಷದ ವರಿಷ್ಠರಿಗೆ ಯಡಿಯೂರಪ್ಪ ಹೆಸರನ್ನು ಕಳುಹಿಸಿಕೊಡುವ ಕುರಿತು ಚರ್ಚೆ ನಡೆಸಲಾಗಿದೆ. ಆದರೆ ಈ ಸಂಬಂಧ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮೊದಲ ವಾರದಲ್ಲಿ ಹುಬ್ಬಳ್ಳಿ ಅಥವಾ ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಕಾರ್ಯಕಾರಿಣಿಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ. ಆ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಭಾಗವಹಿಸಲಿದ್ದಾರೆ.