ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಕೋರೆ, ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಬಿಜೆಪಿ ಮುಖಂಡರಾದ ಪ್ರಭಾಕರ ಕೋರೆ ಹಾಗೂ ಕೆ.ಎಸ್.ಈಶ್ವರಪ್ಪ ಕ್ರಮವಾಗಿ ರಾಜ್ಯಸಭೆ ಹಾಗೂ ವಿಧಾನ ಪರಿಷತ್ಗೆ ನಾಮಪತ್ರ...

Rashmi Kasaragodu
Updated On : 8 Jun 2014, 12:48 pm

ಬೆಂಗಳೂರು: ಬಿಜೆಪಿ ಮುಖಂಡರಾದ ಪ್ರಭಾಕರ ಕೋರೆ ಹಾಗೂ ಕೆ.ಎಸ್.ಈಶ್ವರಪ್ಪ ಕ್ರಮವಾಗಿ ರಾಜ್ಯಸಭೆ ಹಾಗೂ ವಿಧಾನ ಪರಿಷತ್ಗೆ ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿಯ ವಿಧಾನಸಭೆ ಸಂಖ್ಯಾಬಲದ ಮೇಲೆ, ಹಾಲಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಯ್ಕೆ ನಿಶ್ಚಿತವಾಗಿದೆ.
ಜೂ.19ರಂದು ವಿಧಾನಪರಿಷತ್ ಹಾಗೂ ರಾಜ್ಯಸಭೆಗೆ ಪ್ರತ್ಯೇಕ ಚುನಾವಣೆ ನಡೆಯಲಿದೆ. ಬಿಜೆಪಿ ಹಾಗೂ ಜೆಡಿಎಸ್ನ ಹೆಚ್ಚುವರಿ ಮತದ ಮೇಲೆ ಕಣ್ಣಿಟ್ಟು ಉದ್ಯಮಿ ಡಿ.ಯು.ಮಲ್ಲಿಕಾರ್ಜುನ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಶಾಂತಿನಗರ ಕ್ಷೇತ್ರದಿಂದ 2009ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಮಲ್ಲಿಕಾರ್ಜುನ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಲು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
ಆಶ್ಚರ್ಯ ಮೂಡಿಸಿದ ಕುಪೇಂದ್ರ ನಡೆ: ರಾಜ್ಯಸಭೆಗೆ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಜೆಡಿಎಸ್ನ ಅಧಿಕೃತ ಅಭ್ಯರ್ಥಿಯಾಗಿ ಕೊನೆಯ ಕ್ಷಣದಲ್ಲಿ ಉದ್ಯಮಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಸೆಡ್ಡು ಹೊಡೆದಿರುವ ಕುಪೇಂದ್ರ ರೆಡ್ಡಿ ಜೆಡಿಎಸ್ ಮೂಲಕ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಕುಪೇಂದ್ರ ರೆಡ್ಡಿ ಅವರಿಗೆ 6 ಸದಸ್ಯರ ಕೊರತೆ ಉಂಟಾಗಲಿದ್ದು ಎಲ್ಲಿಂದ ತುಂಬಲಿದ್ದಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement