ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಮಂಡ್ಯದಲ್ಲಿ ಭುಗಿಲೆದ್ದ ಕಾವೇರಿ ಆಕ್ರೋಶ

ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಪ್ರಸ್ತಾಪ ವಿರೋಧಿಸಿ ರೈತ ಸಂಘದ...

Rashmi Kasaragodu
Updated On : 8 Jun 2014, 2:00 am

ಮಂಡ್ಯ: ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಪ್ರಸ್ತಾಪ ವಿರೋಧಿಸಿ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಶನಿವಾರ ರಸ್ತೆತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಕಾವೇರಿ ವನದ ಸರ್.ಎಂ. ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಜಮಾಯಿಸಿದ ರೈತ ಸಂಘದ ನೂರಾರು ಕಾರ್ಯಕರ್ತರು, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಘೋಷಣೆ ಕೂಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿದರು. ಜಯಲಲಿತಾ ಅವರು ಪ್ರತಿ ಬಾರಿಯೂ ಕಾವೇರಿ ವಿಚಾರವಾಗಿ ಕ್ಯಾತೆ ತೆಗೆಯುತ್ತಲೇ ಇದ್ದಾರೆ. ಕೇಂದ್ರದಲ್ಲಿ ಎನ್‌ಡಿಎ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಒತ್ತಡ ಹೇರಿದ್ದಾರೆ. ಅವರ ಮನವಿಯನ್ನು ಕೇಂದ್ರ ತಿರಸ್ಕರಿಸಬೇಕೆಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement