ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ವಿಭಜನೆಗೊಂಡ ಆಂಧ್ರಕ್ಕೆ ನಾಯ್ಡು ಮೊದಲ ಸಿಎಂ

ವಿಭಜನೆಗೊಂಡ ಆಂಧ್ರಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಟಿಡಿಪಿ ಅಧ್ಯಕ್ಷ ಚಂದ್ರಬಾಬು...

Rashmi Kasaragodu
Updated On : 9 Jun 2014, 1:08 am

ಹೈದರಾಬಾದ್/ವಿಜಯವಾಡ: ವಿಭಜನೆಗೊಂಡ ಆಂಧ್ರಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಜಯವಾಡದಿಂದ 18 ಕಿಮೀ ದೂರದಲ್ಲಿರುವ ನಾಗಾರ್ಜುನ ಸಾಗರದಲ್ಲಿ ಸಂಜೆ 7.27ಕ್ಕೆ ಪ್ರಮಾಣ ವಚನ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಟಿಡಿಪಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅನಂತಕುಮಾರ್, ಕಲ್ರಾಜ್ ಮಿಶ್ರಾ, ಪ್ರಕಾಶ್ ಜಾವಡೇಕರ್,  ವೆಂಕಯ್ಯ ನಾಯ್ಡು, ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ, ಬಾಲಿವುಡ್ ನಟ ವಿವೇಕ್ ಒಬೆರಾಯ್ ಮತ್ತು ತೆಲುಗು ಚಿತ್ರರಂಗದ ಗಣ್ಯರು ಭಾಗವಹಿಸಿದ್ದರು.
ಮುಖ್ಯಮಂತ್ರಿಗಳಾದಪಿ.ಎಸ್.ಬಾದಲ್, ಮನೋಹರ್ ಪರಿಕ್ಕರ್, ಡಾ.ರಮಣ್ಸಿಂಗ್ ಸೇರಿದಂತೆ ಹಲವು ಗಣ್ಯರು ಇದ್ದರು.
ಶುಭ ಹಾರೈಸಿದ ಮೋದಿ: ನೂತನ ಮುಖ್ಯಮಂತ್ರಿಗೆ ಶುಭ ಹಾರೈಸಿರುವ ಪ್ರಧಾನಿ ನರೇಂದ್ರ ಮೋದಿ ಹೊಸ ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವತಿಯಿಂದ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement