ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಬೆಂಗ್ಳೂರು ಕೋರ್ಟಲ್ಲೇ ಜಯಲಲಿತಾ ವಿಚಾರಣೆ

ಭ್ರಷ್ಟಾಚಾರ ಮತ್ತು ಆದಾಯಕ್ಕೆ ಮೀರಿ 66 ಕೋಟಿ ಆಸ್ತಿ ಗಳಿಕೆ ಪ್ರಕರಣದಲ್ಲಿ...

Mainashree
Updated On : 17 Jun 2014, 10:55 am

ಕನ್ನಡಪ್ರಭ ಪ್ರತಿನಿಧಿಯಿಂದ
ನವದೆಹಲಿ
: ಭ್ರಷ್ಟಾಚಾರ ಮತ್ತು ಆದಾಯಕ್ಕೆ ಮೀರಿ 66 ಕೋಟಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಸಿಎಂ ಜಯಲಲಿತಾಗೆ ಮತ್ತೆ ಹಿನ್ನಡೆಯಾಗಿದೆ. ಈ ಪ್ರಕರಣದ ವಿಚಾರಣೆ ಬೆಂಗಳೂರಿನಲ್ಲಿಯೇ ನಡೆಯಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ತಮಿಳುನಾಡಿನಲ್ಲಿ ವಿಚಾರಣೆ ನಡೆಸಬೇಕೆಂಬ ಕೋರಿಕೆಯನ್ನೂ ಮಂಗಳವಾರ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಆದೇಶದ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ಬೆಂಗಳೂರಿನ ನ್ಯಾಯಾಲಯದಲ್ಲಿ ಪುನಾರಂಭಗೊಳ್ಳಲಿದೆ. ವಿಚಾರಣೆಗೆ ಹಾಜರಾಗುವಂತೆಯೂ ಕೋರ್ಟ್ ಸೂಚಿಸಿದೆ.
ಡಿಎಂಕೆ ಅಧಿಕಾರದಲ್ಲಿದ್ದಾಗ ಜಯಲಲಿತಾ ವಿರುದ್ಧ ಪ್ರಕರಣ ದಾಖಲಿಸಿತ್ತು. ಜಯಲಲಿತಾ  ಮತ್ತೆ ಅಧಿಕಾರಕ್ಕೆ ಬಂದಾಗ ಪ್ರಕರಣದ ವಿಚಾರಣೆಯನ್ನು ತಮಿಳುನಾಡಿನಿಂದ ಹೊರಗೆ ನಡೆಸುವಂತೆ ಡಿಎಂಕೆ ಕೋರಿತ್ತು.  ವಿಚಾರಣೆಯನ್ನು 2003ರಲ್ಲಿ ಬೆಂಗಳೂರಿಗೆ ವರ್ಗಾಯಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement