ಮೌಲ್ವಿಗಳಿಗೆ ರು. 3 ಸಾವಿರ: ಕಾಗೇರಿ ಆಕ್ಷೇಪ
ಬಳ್ಳಾರಿ: ಮೌಲ್ವಿಗಳಿಗೆ 3 ಸಾವಿರ ನೀಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ದೇವಸ್ಥಾನದಿಂದ ಸರ್ಕಾರಕ್ಕೆ ಬರುವ ಹಣದಲ್ಲೇ ಅರ್ಚಕರಿಗೆ ಸಂಬಳ ನೀಡಲಾಗುತ್ತಿದೆ. ಆದರೆ, ಯಾವ ಮಸೀದಿಗಳಿಂದ ಎಷ್ಟು ಹಣ ಸರ್ಕಾರಕ್ಕೆ ಬರುತ್ತಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಮಾಜಿ ಸಚಿವ, ಬಿಜೆಪಿ ಮುಖಂಡ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಬುಧವಾರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಮಾಜದಲ್ಲಿ ತಾರತಮ್ಯ ನೀತಿ ಹುಟ್ಟುಹಾಕುತ್ತಿದೆ. ಮೌಲ್ವಿಗಳಿಗೆ ಹಣ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಯಾವ ಮಸೀದಿಗಳಿಂದ ಸರ್ಕಾರಕ್ಕೆ ಎಷ್ಟು ಹಣ ಬರುತ್ತದೆ ಎಂಬುದನ್ನು ಬಹಿರಂಗಪಡಿಸಲಿ ಎಂದರು.