ಕಳಪೆ ಸಾಧಕರಿಗೆ ಸಂಪುಟ ಸ್ಥಾನವಿಲ್ಲ
ವಿಧಾನ ಮಂಡಲ ಅಧಿವೇಶನದ ನಂತರ ಕಳಪೆ ಸಾಧನೆ ತೋರಿದ ಸಚಿವರನ್ನು ಸಂಪುಟದಿಂದ...
ಬೆಂಗಳೂರು: ವಿಧಾನ ಮಂಡಲ ಅಧಿವೇಶನದ ನಂತರ ಕಳಪೆ ಸಾಧನೆ ತೋರಿದ ಸಚಿವರನ್ನು ಸಂಪುಟದಿಂದ ಕೈ ಬಿಡುವ ಕಠಿಣ ಕ್ರಮ ಅನಿವಾರ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬುಧವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಕೆಲ ಸಚಿವರ ವರ್ತನೆ ಬಗ್ಗೆ ಆಕ್ಷೇಪಿಸಿದ್ದಾರೆ. ಬಲಿಷ್ಠ ಆಡಳಿತ ನೀಡುವ ಭರವಸೆಯೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಸಚಿವ ಸಂಪುಟದಲ್ಲಿ ಸಣ್ಣಪುಟ್ಟ ಬದಲಾವಣೆ ಅಗತ್ಯವಾಗಬಹುದು ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಹೈಕಮಾಂಡ್ ಜತೆ ಚರ್ಚೆ ನಡೆಸಿದ ಬಳಿಕ ಈ ಬಗ್ಗೆ ನಿರ್ಧಾರ ಮಾಡುತ್ತೇವೆ. ಜತೆಗೆ ಶಾಸಕರು ಮತ್ತು ಕಾರ್ಯಕರ್ತ ಮುಖಂಡರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ನೀಡುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದು ಹೇಳಿದರು.