ಹುಲಕೋಟಿ ಬಳಿ ಭೀಕರ ಅಪಘಾತ: 11 ಸಾವು
ಹುಲಕೋಟಿ ಗ್ರಾಮದ ಬಳಿ ಗುರುವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 11 ಜನ ಮೃತಪಟ್ಟಿದ್ದಾರೆ...
ಗದಗ: ಹುಲಕೋಟಿ ಗ್ರಾಮದ ಬಳಿ ಗುರುವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 11 ಜನ ಮೃತಪಟ್ಟಿದ್ದಾರೆ.
ಹುಬ್ಬಳ್ಳಿ ತಾಲೂಕಿನ ಉಮ್ಮಚಗಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಯಲಬುರ್ಗಾ ತಾಲೂಕು ಸಿದ್ನೆಕೊಪ್ಪ ಹಾಗೂ ಸುತ್ತಲಿನ ಗ್ರಾಮದವರು ಎರಡು ಟ್ರ್ಯಾಕ್ಟರ್ಗಳಲ್ಲಿ ಬಂದಿದ್ದರು. ಊಟ ಮುಗಿಸಿ ಮರಳುವಾಗ ರಾತ್ರಿ 7.45ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಸುಮಾರು 20ಕ್ಕೂ ಹೆಚ್ಚು ಜನರು ಟ್ರಾಲಿಯಲ್ಲಿ ಕುಳಿತು ಪ್ರಯಾಣಿಸುತ್ತಿದ್ದರು. ಟ್ರ್ಯಾಕ್ಟರ್ಗೆ ಟಿಪ್ಪರ್ ಹಿಂದಿನಿಂದ ರಭಸವಾಗಿ ಡಿಕ್ಕಿ ಹೊಡೆದಿದ್ದು, ಮೃತರ ಸಂಖ್ಯೆ ಹೆಚ್ಚಲು ಕಾರಣವಾಗಿದೆ. 10 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ 8 ಜನರನ್ನು ಗದಗ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಈ ಪೈಕಿ ತೀವ್ರವಾಗಿ ಗಾಯಗೊಂಡ ನಾಲ್ವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತರು ಹಾಗೂ ಗಾಯಾಳುಗಳ ಹೆಸರು, ವಿವರ ಇನ್ನೂ ತಿಳಿದು ಬಂದಿಲ್ಲ.