ಕಬ್ಬು ಬೆಳೆಗಾರರಿಗೆ ಸಚಿವರಿಂದಲೇ ಮೋಸ: ಶೆಟ್ಟರ್
ಹುಬ್ಬಳ್ಳಿ: ಕಬ್ಬು ಬೆಳೆಗಾರರಿಗೆ ಸರ್ಕಾರ ನಿಗದಿಪಡಿಸಿದ ಬೆಲೆ ನೀಡದ, ಸಕ್ಕರೆ ಕಾರ್ಖಾನೆಗಳುಳ್ಳ ಸಚಿವ ಶಾಮನೂರು ಶಿವಶಂಕರಪ್ಪ, ಸತೀಶ ಜಾರಕಿಹೊಳಿ, ಪ್ರಕಾಶ ಹುಕ್ಕೇರಿ, ಡಿ.ಬಿ. ಇನಾಮದಾರ ಅವನರನ್ನು ಸಂಪುಟದಿಂದ ಕೈಬಿಡಬೇಕೆಂದು ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಸರ್ಕಾರ ಕಬ್ಬಿಗೆ 2560 ನಿಗದಿಪಡಿಸಿದೆ. ಕಾಂಗ್ರೆಸ್ ಸಚಿವ, ಶಾಸಕರೇ ಬೆಳೆಗಾರರಿಗೆ ಮೋಸ ಮಾಡುತ್ತಿದ್ದಾರೆ. ತಾವು ಸಿಎಂ ಆಗಿದ್ದಾಗ ಸಕ್ಕರೆ ಕಾರ್ಖಾನೆಗಳ ಮೇಲೆ ಎಸ್ಎಬಿ ನಿಯಂತ್ರಣವಿತ್ತು. ಸಿದ್ದರಾಮಯ್ಯ ಕಬ್ಬು ಬೆಳೆಗಾರರಿಗೆ ಮೋಸ ಮಾಡುತ್ತಿರುವ ತಮ್ಮ ಮಂತ್ರಿಗಳ ಬೆನ್ನಿಗೆ ನಿಂತಿದ್ದಾರೆ ಎಂದರು.