ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಮಾರ್ಪಾಡಲ್ಲಿ ಉತ್ತರ ಹುಡುಕುತ್ತಿರುವ ಕೈ

ಮಹಾರಾಷ್ಟ್ರ ಮತ್ತು ಅಸ್ಸಾಂಗಳಲ್ಲಿ ನಾಯಕತ್ವ ಬದಲಾಗುವ ಸಾಧ್ಯತೆ ಹೆಚ್ಚಾಗಿದೆ..

Vishwanath S
Updated On : 22 Jun 2014, 2:33 am

ನವದೆಹಲಿ:  ಮಹಾರಾಷ್ಟ್ರ ಮತ್ತು ಅಸ್ಸಾಂಗಳಲ್ಲಿ ನಾಯಕತ್ವ ಬದಲಾಗುವ ಸಾಧ್ಯತೆ ಹೆಚ್ಚಾಗಿದೆ. ಶನಿವಾರ ದಿನವಿಡೀ ಕಾಂಗ್ರೆಸ್ ವಲಯದಲ್ಲಿ ನಡೆದ ಬೆಳವಣಿಗೆಗಳು ಅದಕ್ಕೆ ಪುಷ್ಟಿ ನೀಡಿವೆ. ವಿಶೇಷವಾಗಿ ತಕ್ಷಣವೇ ಮಹಾರಾಷ್ಟ್ರ ಮತ್ತು ಹರ್ಯಾಣದಲ್ಲಿ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳನ್ನು ಬದಲಾಯಿಸುವುದು ಕಾಂಗ್ರೆಸ್‌ಗೆ ಅನಿವಾರ್ಯವೇ ಆಗಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸೋನಿಯಾರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಜತೆಗೆ ಮಾತುಕತೆ ನಡೆಸಿದರು. ಇದಾದ ಬಳಿಕ ಮತ್ತೆ ಪೃಥ್ವಿರಾಜ್ ಅವರು ಸೋನಿಯಾರನ್ನು ಭೇಟಿ ಮಾಡಿದರು.
ಶಿಂದೆ ಸಿಎಂ?: ಚುನಾವಣೆಯಲ್ಲಿ ಸೋತಿರುವ ಕೇಂದ್ರ ಗೃಹ ಖಾತೆ ಮಾಜಿ ಸಚಿವ ಸುಶೀಲ್‌ಕುಮಾರ್ ಶಿಂದೆಯವರೇ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ. ಶಿಂದೆ ಗಾಂಧಿ ಕುಟುಂಬಕ್ಕೆ ಆಪ್ತರೂ ಹೌದು. ಕಾಂಗ್ರೆಸ್ ನಾಯಕರಾದ ಎ.ಕೆ. ಆ್ಯಂಟನಿ, ಗುಲಾಂ ನಬಿ ಆಜಾದ್ ವೀಕ್ಷಕರಾಗಿ ಮುಂಬೈಗೆ ತೆರಳಲಿದ್ದಾರೆ.
ಹೂಡ ಬಚಾವ್?: ಹರ್ಯಾಣದಲ್ಲಿ ಕಾಂಗ್ರೆಸ್ 4 ಸ್ಥಾನ ಪಡೆದುಕೊಂಡರೂ ಸಿಎಂ ಸ್ಥಾನದಿಂದ ಭೂಪಿಂದರ್ ಸಿಂಗ್ ಹೂಡ ಅವರನ್ನು ಬದಲಿಸದೇ ಇರಲು ವರಿಷ್ಠರು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.
ಖರ್ಗೆ ಗುವಾಹಟಿಗೆ
ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೊಯ್ ಕೂಡ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಅಧಿಕವಾಗಿದೆ. ಈ ನಿಟ್ಟಿನಲ್ಲಿ ಅಲ್ಲಿನ ಕಾಂಗ್ರೆಸ್ ಮುಖಂಡರ ಜತೆ ಚರ್ಚಿಸಲು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂದಿನ ವಾರ ಗುವಾಹಟಿಗೆ ವೀಕ್ಷಕರಾಗಿ ತೆರಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement