ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಕಬ್ಬು ಬೆಳೆಗಾರರ ನಿರಶನ

Mainashree
Updated On : 22 Jun 2014, 10:00 am

ಬಿಜಾಪುರ: ಪ್ರತಿ ಟನ್ ಕಬ್ಬಿಗೆ ಮುಂಗಡವಾಗಿ 2 ಸಾವಿರ ನೀಡಬೇಕು, ಕಬ್ಬು ಪೂರೈಸಿದ 14 ದಿನದೊಳಗೆ ಬಿಲ್ ಪಾವತಿಸಬೇಕು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಭಾನುವಾರದಿಂದ ರೈತರು ಸರದಿ ನಿರಶನ ಆರಂಭಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಈ ನಿರಶನದಲ್ಲಿ ಜಿಲ್ಲೆಯ ಸಿಂದಗಿ ತಾಲೂಕಿನ ಗುಂದಗಿ, ಆಹೇರಿ, ಮಲಘಾಣ ಹಾಗೂ ಇಂಡಿ ತಾಲೂಕಿನ ಅರ್ಜುನಗಿ, ರೂಡಗಿ, ಅಗರಖೇಡ ಗ್ರಾಮಗಳ ಸುಮಾರು 50 ರೈತರು ಪಾಲ್ಗೊಂಡಿದ್ದಾರೆ. ಇದೇ ವೇಳೆ, ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆಗಳ ಒಕ್ಕೂಟ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ 7ನೇ ದಿನಕ್ಕೆ ಕಾಲಿಟ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement