ರಾಜ್ಯದ ಅಭಿವೃದ್ಧಿಗೆ ಪಕ್ಷಾತೀತ ಹೋರಾಟ
ಮೈಸೂರು: ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಸಂಸದರೆಲ್ಲರೂ ಪಕ್ಷಾತೀತವಾಗಿ ಹೋರಾಟ ಮಾಡಿ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಲು ಪ್ರಯತ್ನಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಿ.ಎಸ್. ಯಡಿಯೂರಪ್ಪ ಹೇಳಿದರು. ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಅಭಿವೃದ್ಧಿಗೆ ಸಂಸದರೆಲ್ಲ ಪಕ್ಷಾತೀತವಾಗಿ ಹೋರಾಟ ಮಾಡುವುದಕ್ಕೆ ನಿರ್ಧರಿಸಿದ್ದೇವೆ. ರಾಜ್ಯದ ವಿಚಾರ ಬಂದಾಗ ರಾಜಕೀಯ ಬದಿಗೊತ್ತಿ ಹೋರಾಟ ಮಾಡುವುದು ಅನಿವಾರ್ಯ. ಈ ಹಿನ್ನೆಲೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸುವುದಕ್ಕೆ ಶ್ರಮಿಸುವುದಾಗಿ ತಿಳಿಸಿದರು.