ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಸರ್ಕಾರದ ಪಟ್ಟಿ ತಿರಸ್ಕರಿಸಿ: ರಾಜ್ಯಪಾಲರಿಗೆ ಬಿಜೆಪಿ ಮನವಿ

Mainashree
Updated On : 22 Jun 2014, 10:44 am

ಬೆಂಗಳೂರು: ವಿಧಾನಪರಿಷತ್‌ಗೆ ನಾಮನಿರ್ದೇಶನ ಮಾಡುವಾಗ ರಾಜಕೀಯ ವ್ಯಕ್ತಿಗಳನ್ನು ಪರಿಗಣಿಸಬಾರದು ಎಂದು ರಾಜ್ಯ ಬಿಜೆಪಿ ನಾಯಕರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ಈ ಹಿಂದೆ 2010ರಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಅವರ ನಾಮನಿರ್ದೇಶನಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿದ್ದಾಗ ತಿರಸ್ಕರಿಸಲಾಗಿತ್ತು. ರಾಜಕೀಯ ವ್ಯಕ್ತಿಯನ್ನು ಸಮಾಜ ಸೇವೆ ವಿಭಾಗದಲ್ಲಿ ಪರಿಗಣಿಸಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ರಾಜಭವನದಿಂದಲೇ ಬಂದಿತ್ತು. ಆದರೆ ಈಗ ರಾಜ್ಯ ಸರ್ಕಾರ ಸಂವಿಧಾನದ 171ನೇ ವಿಧಿಯನ್ನು ದುರ್ಬಳಕೆ ಮಾಡುತ್ತಿದೆ. ಸಾಹಿತ್ಯ, ಕಲೆ, ಸಹಕಾರ ಕ್ಷೇತ್ರ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಕೊಂಡವರ ಹೆಸರು ಶಿಫಾರಸು ಮಾಡುವ ಬದಲು ರಾಜಕೀಯ ವ್ಯಕ್ತಿಗಳ ಹೆಸರನ್ನು ಕಳುಹಿಸಿಕೊಟ್ಟಿದೆ ಎಂದು ರಾಜ್ಯಪಾಲರಿಗೆ ನೀಡಿದ ಮನವಿ ಪತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ರಾಜ್ಯಪಾಲರು ಕಾನೂನು ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರದ ಪಟ್ಟಿಯನ್ನು ತಿರಸ್ಕರಿಸಬೇಕು ಎಂದು ರಾಜಭವನದಲ್ಲಿ ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ಶೆಟ್ಟರ್ ನೇತೃತ್ವದ ನಿಯೋಗದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ, ವಿ.ಸೋಮಣ್ಣ, ಶಾಸಕ ಅಶ್ವತ್ಥ್ಥನಾರಾಯಣ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement