ಈಶ್ವರಪ್ಪ ವಿಧಾನಪರಿಷತ್ ಪ್ರತಿಪಕ್ಷ ನಾಯಕ
ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರನ್ನು ವಿಧಾನ ಪರಿಷತ್ ಪ್ರತಿಪಕ್ಷ ನಾಯಕನ್ನಾಗಿ ನೇಮಿಸಲು ಬಿಜೆಪಿ ಕಾರ್ಯಕಾರಿಣಿ ನಿರ್ಧರಿಸಿದೆ. ಈಶ್ವರಪ್ಪ ಅವರು ಜು.1ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಲಿಯವರೆಗೆ ಪ್ರತಿಪಕ್ಷ ಉಪನಾಯಕ ಕೆ.ಬಿ.ಶಾಣಪ್ಪ ಅವರು ಪ್ರತಿಪಕ್ಷ ನಾಯಕನ ಜವಾಬ್ದಾರಿ ನಿಭಾಯಿಸಲಿದ್ದಾರೆ. ರೇಲ್ವೆ ಸಚಿವ ಡಿ.ವಿ.ಸದಾನಂದಗೌಡರಿಂದ ಈ ಸ್ಥಾನ ತೆರವಾಗಿತ್ತು.