ನ., ಡಿಸೆಂಬರ್ನಲ್ಲಿ ಜಾತಿ ಸಮೀಕ್ಷೆ
ಶಿಕ್ಷಕೇತರ ಸರ್ಕಾರಿ ಸಿಬ್ಬಂದಿಗಳ ನೆರವು ಪಡೆದುಕೊಂಡು ನವೆಂಬರ್ ಹಾಗೂ ಡಿಸೆಂಬರ್ನಲ್ಲಿ ಜಾತಿ ಸಮೀಕ್ಷೆ ನಡೆಸಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ. ಕಳೆದ ಮೇ ಅಥವಾ ಮುಂಬರುವ ಅಕ್ಟೋಬರ್ನಲ್ಲಿ ಜಾತಿ ಸಮೀಕ್ಷೆ ನಡೆಸಲು ಸರ್ಕಾರ ಚಿಂತಿಸಿತ್ತು. ಆದರೆ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಶಿಕ್ಷಕರನ್ನು ಇತರೆ ಚಟುವಟಿಕೆಗೆ ಉಪಯೋಗಿಸಿಕೊಳ್ಳುವುದು ಕಾನೂನು ಬಾಹಿರ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಇತರೆ ಸಿಬ್ಬಂದಿಗಳ ಸಹಾಯವನ್ನು ಸಮೀಕ್ಷೆಗೆ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿಯ ಎಂ.ಡಿ.ಲಕ್ಷ್ಮಿನಾರಾಯಣ ಅವರ ಪ್ರಶ್ನೆಗೆ ಅವರು ಉತ್ತರಿಸಿದರು.
ವಸತಿ ನಿಲಯಕ್ಕೆ ವರ್ಷದಲ್ಲಿ ಕಾಯಕಲ್ಪ: ಹಿಂದುಳಿದ ವರ್ಗಗಳ ವಸತಿ ನಿಲಯಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ 1014 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದರು.