ಯೋಗೇಶ್ವರ್ಗೆ ಕಾಂಗ್ರೆಸ್ ಸದಸ್ಯನೆಂಬ ಮಾನ್ಯತೆ
ವಿಧಾನಸಭೆ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ ಸದಸ್ಯ ಎಂಬ ಮಾನ್ಯತೆ ಪಡೆದಿದ್ದಾರೆ. ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ವಿಧಾನಸಭೆಯಲ್ಲಿ ಈ ವಿಷಯ ಪ್ರಕಟಿಸಿದ್ದಾರೆ. ತಾವು ಸಮಾಜವಾದಿ ಪಕ್ಷ ತೊರೆದಿದ್ದು ಕಾಂಗ್ರೆಸ್ ಸೇರಿದ್ದೇನೆ. ಹೀಗಾಗಿ ಕಾಂಗ್ರೆಸ್ ಸದಸ್ಯನೆಂದು ಮಾನ್ಯ ಮಾಡುವಂತೆ ಯೋಗೇಶ್ವರ್ ನೀಡಿದ ಪತ್ರದ ಹಿನ್ನೆಲೆಯಲ್ಲಿ ಅವರ ಬೇಡಿಕೆಯನ್ನು ಮಾನ್ಯ ಮಾಡಲಾಗಿದೆ. ಅದೇ ರೀತಿ ಬಿ.ಎಸ್.ಯಡಿಯೂರಪ್ಪ, ಬಿ.ಶ್ರೀರಾಮುಲು, ಪ್ರಕಾಶ್ ಹುಕ್ಕೇರಿಯವರು ಸಂಸದರಾಗಿ ಆಯ್ಕೆಗೊಂಡಿದ್ದರಿಂದ ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಅಂಗೀಕರಿಸಲಾಗಿದೆ ಎಂದು ತಿಳಿಸಿದರು.