ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಪರಿಷತ್ ಪಟ್ಟಿಗೆ ಹಂಸ ಅಂಕಿತ

ಮೇಲ್ಮನೆ ನಾಮನಿರ್ದೇಶನ ಪಟ್ಟಿಗೆ ರಾಜ್ಯಪಾಲರ ಒಪ್ಪಿಗೆ ಪಡೆದು ಮುಖ್ಯಮಂತ್ರಿ ಸಿದ್ದರಾಮಯ್ಯ...

Mainashree
Updated On : 24 Jun 2014, 9:37 am

ಬೆಂಗಳೂರು: ಮೇಲ್ಮನೆ ನಾಮನಿರ್ದೇಶನ ಪಟ್ಟಿಗೆ ರಾಜ್ಯಪಾಲರ ಒಪ್ಪಿಗೆ ಪಡೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದಲ್ಲಿ ಮತ್ತೆ ಮೇಲುಗೈ ಸಾಧಿಸಿದ್ದರೂ ಪದವೀಧರ, ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ಒಂದು ಸ್ಥಾನ ಗೆಲ್ಲುವ ಮೂಲಕ ಹಿನ್ನಡೆ ಅನುಭವಿಸಿದ್ದಾರೆ.
ತಲಾ ಎರಡು ಸ್ಥಾನಗಳ ಪೈಕಿ ಕಾಂಗ್ರೆಸ್ ಒಂದರಲ್ಲಿ ಮಾತ್ರ ಜಯ ಸಾಧಿಸಿದ್ದು, ಜೆಡಿಎಸ್ 2 ಹಾಗೂ ಬಿಜೆಪಿ 1 ಸ್ಥಾನ ಗೆದ್ದಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್‌ನ ಶರಣಪ್ಪ ಮತ್ತೂರು ಗೆದ್ದಿದ್ದಾರೆ. ಬೆಂಗಳೂರು ಶಿಕ್ಷಕ ಕ್ಷೇತ್ರದಲ್ಲಿ ಬಿ.ಕೆ.ವೆಂಕಟೇಶ್ ಕೇವಲ 114 ಮತ ಪಡೆವ ಮೂಲಕ ರಾಜಧಾನಿಯ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ತಿರಸ್ಕರಿಸಿದ್ದಾರೆ. ಸಿದ್ದರಾಮಯ್ಯ ಸಂಪುಟದ ಐವರು ಸಚಿವರು ಬೆಂಗಳೂರನ್ನು ಪ್ರತಿನಿಧಿಸುತ್ತಿದ್ದರೂ ಜೆಡಿಎಸ್‌ನ ಪುಟ್ಟಣ್ಣರ ನಾಗಲೋಟವನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ.
ಆದರೆ ವಿಧಾನಪರಿಷತ್ ನಾಮನಿರ್ದೇಶನ ವಿಚಾ ರದಲ್ಲಿ ತಾವೇ ಖುದ್ದು ಅಭ್ಯರ್ಥಿಗಳ ಪಟ್ಟಿಯನ್ನು ರಾಜ ಭವನಕ್ಕೆ ಕೊಂಡೊಯ್ದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಒಪ್ಪಿಗೆ ಪಡೆದಿದ್ದಾರೆ. ಅದನ್ನು ಮಂಗಳವಾರವೇ ಚುನಾವಣಾ ಆಯೋಗಕ್ಕೂ ಕಳುಹಿಸಲಾಗಿದೆ.
ಈ ಮೂಲಕ ನಾಮನಿರ್ದೇಶನ ಪಟ್ಟಿಯಲ್ಲಿದ್ದ ವಿ.ಎಸ್.ಉಗ್ರಪ್ಪ, ಅಬ್ದುಲ್ ಜಬ್ಬಾರ್, ಜಯಮಾಲಾ, ಇಕ್ಬಾಲ್ ಅಹ್ಮದ್ ಸರಡಗಿ ಮತ್ತು ಐವನ್ ಡಿಸೋಜಾ ಅವರು ವಿಧಾನ ಪರಿಷತ್ ಪ್ರವೇಶಿಸಿದ್ದಾರೆ.
ಪಶ್ಚಿಮ ಪದವಿಧರ ಕ್ಷೇತ್ರದಲ್ಲಿ ಬಿಜೆಪಿಯ ಸಂಕನೂರು, ಆಗ್ನೇಯ ಪದವಿಧರ ಕ್ಷೇತ್ರದಲ್ಲಿ ಜೆಡಿಎಸ್‌ನ ಚೌಡಾ ರೆಡ್ಡಿ, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಶರಣಪ್ಪ ಮತ್ತೂರು, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ನ ಪುಟ್ಟಣ್ಣ ಜಯ ಗಳಿಸಿದ್ದಾರೆ.
ಇದರೊಂದಿಗೆ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ 10 ಸದಸ್ಯ ಬಲ ಹೆಚ್ಚಿಸಿಕೊಂಡಿದೆಯಾದರೂ ಪರಿಷತ್‌ನಲ್ಲಿ ಮೇಲುಗೈ ಸಾಧಿಸಲು ಇನ್ನೂ ಕಾಯಬೇಕು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement