ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಕೃಷ್ಣಾ ಮೇಲ್ದಂಡೆ ಪುನರ್ವಸತಿ ತಕರಾರು ಸಲ್ಲಿಸಲು ಅವಕಾಶ

Vishwanath S
Updated On : 26 Jun 2014, 12:07 pm

ಧಾರವಾಡ: ಕೃಷ್ಣಾ ಮೇಲ್ದಂಡೆ 3ನೇ ಹಂತದ ಪುನರ್ವಸತಿ ಯೋಜನೆಗೆ ಭೂಸ್ವಾಧೀನಕ್ಕೆ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇಲ್ಲಿಯ ಹೈಕೋರ್ಟ್ ಪೀಠ ಬುಧವಾರ ಇತ್ಯರ್ಥಗೊಳಿಸಿದೆ. ಪುನರ್ವಸತಿ ಯೋಜನೆಗೆ ಬಾಗಲಕೋಟೆ ಜಿಲ್ಲೆಯ 1627 ಎಕರೆ ಭೂಮಿ ವಶಪಡಿಸಿಕೊಳ್ಳಲು ಸರ್ಕಾರ 2013ರ ನವೆಂಬರ್‌ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆಯಲ್ಲಿ ಕಲಂ 17ರ ಅಡಿಯಲ್ಲಿ ಭೂ ಮಾಲೀಕರಿಗೆ ತಕರಾರು ಸಲ್ಲಿಸಲು ಅವಕಾಶ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದನ್ನು ಪ್ರಶ್ನಿಸಿ ಭೂಮಾಲೀಕರಾದ ರವಿ ಕಮತಗಿ ಹಾಗೂ 41 ರೈತರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವೇಣುಗೋಪಾಲಗೌಡ ಅವರಿದ್ದ ಏಕಸದಸ್ಯ ಪೀಠ, ಒಂದು ವಾರದೊಳಗೆ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ ಭೂ ಮಾಲೀಕರಿಗೆ ತರಕಾರು ಸಲ್ಲಿಸಲು ಅವಕಾಶ ನೀಡಲಾಯಿತು. ಅಲ್ಲದೇ, ರೈತರು ಸಲ್ಲಿಸುವ ತಕರಾರುಗಳನ್ನು ಒಂದು ತಿಂಗಳೊಳಗೆ ಪರಿಗಣಿಸುವಂತೆ ಭೂಸ್ವಾಧೀನಾಧಿಕಾರಿಗಳಿಗೆ ನ್ಯಾಯಮೂರ್ತಿಗಳು ನಿರ್ದೇಶನ ನೀಡಿ, ಆದೇಶ ನೀಡಿದರು. ಅರ್ಜಿದಾರರ ಪರವಾಗಿ ಬಸವರಾಜ ಗೂಡಚಿ ವಕಾಲತು ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement