ಸಿಎಂ, ಪರಮ್ಗೆ ಹೈಕಮಾಂಡ್ ಬುಲಾವ್
ಬೆಂಗಳೂರು: ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಬುಲಾವ್ ನೀಡಿದ್ದಾರೆ. ಜುಲೈ 2ರಂದು ದೆಹಲಿಗೆ ಆಗಮಿಸುವಂತೆ ಸೂಚನೆ ನೀಡಲಾಗಿದ್ದು, ಈ ಇಬ್ಬರು ನಾಯಕರ ಜತೆಗೆ ರಾಜ್ಯದ ಎಲ್ಲ ಸಂಸದರು ಹಾಗೂ ಮುಂಚೂಣಿ ಘಟಕದ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಏಳು ಭ್ರಷ್ಟ ಅಧಿಕಾರಿಗಳ 7 ಕೋಟಿ ಅಕ್ರಮ ಆಸ್ತಿ
ಬೆಂಗಳೂರು: ರಾಜ್ಯದ ಏಳು ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಸೇರಿದ 23 ಸ್ಥಳಗಳ ಮೇಲೆ ಶುಕ್ರವಾರ ಏಕಕಾಲದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು 7 ಕೋಟಿಗೂ ಅಧಿಕ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.