ಬಂಗಾರು ಲಕ್ಷ್ಮಣ್ ನಿಧನ
ಬಿಜೆಪಿ ಮೊದಲ ದಲಿತ ಅಧ್ಯಕ್ಷ ಬಂಗಾರು ಲಕ್ಷ್ಮಣ್(73) ಶನಿವಾರ ಹೈದರಾಬಾದ್ನಲ್ಲಿ ಕೊನೆಯುಸಿರೆಳೆದರು. ದೀರ್ಘ ಕಾಲಿನ...
ಹೈದರಾಬಾದ್: ಬಿಜೆಪಿ ಮೊದಲ ದಲಿತ ಅಧ್ಯಕ್ಷ ಬಂಗಾರು ಲಕ್ಷ್ಮಣ್(73) ಶನಿವಾರ ಹೈದರಾಬಾದ್ನಲ್ಲಿ ಕೊನೆಯುಸಿರೆಳೆದರು.
ದೀರ್ಘ ಕಾಲಿನ ಅನಾರೋಗ್ಯ ಹಿನ್ನೆಲೆಯಲ್ಲಿ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಕ್ಷ್ಮಣ್ ಅವರು ಬೆಳಗ್ಗೆ 5 ಗಂಟೆಗೆ ಹೃದಯಾಘಾತದಿಂದ ಮೃತಪಟ್ಟರು.
ಎನ್ಡಿಎ ಅವಧಿಯಲ್ಲಿ ರೇಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಬಂಗಾರು ಲಕ್ಷ್ಮಣ್ ನಂತರ ಬಿಜೆಪಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಬಿಜೆಪಿ ಅಧ್ಯಕ್ಷರಾದ ಮೊದಲ ಹಿಂದುಳಿದ ವರ್ಗಗಳಿಗೆ ಸೇರಿದವರು ಎಂಬ ಖ್ಯಾತಿಗೂ ಒಳಗಾಗಿದ್ದರು. ಆದರೆ, ತೆಹೆಲ್ಕಾ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ನಕಲಿ ರಕ್ಷಣಾ ಖರೀದಿದಾರರಿಂದ ಹಣ ಸ್ವೀಕರಿಸಿದ ಆರೋಪ ಲಕ್ಷ್ಮಣ್ ಅವರನ್ನು ಸುತ್ತಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಅಮಾನತು ಮಾಡಲಾಗಿತ್ತು. ಜತೆಗೆ, ಪ್ರಕರಣಕ್ಕೆ ಸಂಬಂಧಿಸಿ 2012ರಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ನಾಲ್ಕು ವರ್ಷ ಶಿಕ್ಷೆಯನ್ನೂ ವಿಧಿಸಿತ್ತು. ಲಕ್ಷ್ಮಣ್ ಅವರಿಗೆ ಮೂವರು ಪುತ್ರಿಯರು, ಪುತ್ರ ಇದ್ದಾರೆ.