ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಶೀಘ್ರವೇ 3091 ಹುದ್ದೆ ಭರ್ತಿ

Mainashree
Updated On : 1 Mar 2014, 11:03 am

ಬಳ್ಳಾರಿ: ಈಶಾನ್ಯ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 3091 ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ತಾಲೂಕಿನ ಕುಡಿತಿನಿಯಲ್ಲಿ ನೂತನ ಬಸ್ ನಿಲ್ದಾಣ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈದರಾಬಾದ್ ಕರ್ನಾಟಕ ವಿಶೇಷ ಸ್ಥಾನಮಾನ 371ಜೆ ಅಡಿ ನೇಮಕಾತಿ ನಡೆಯಲಿದೆ. ಇನ್ನು ರಾಜ್ಯದಲ್ಲಿ ಖಾಲಿ ಇರುವ ಆರ್‌ಟಿಒ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಭರ್ತಿ ಮಾಡುವ ಕಾರ್ಯ ನಡೆಯುತ್ತಿದೆ. ಈಶಾನ್ಯ ಭಾಗದ ಕೆಲ ಗ್ರಾಮಗಳಿಗೆ ಬಸ್ ಸೌಲಭ್ಯದ ಕೊರತೆ ಇದೆ. ಈಶಾನ್ಯ ಸಾರಿಗೆ ಸಂಸ್ಥೆಗೆ ಈ ವರ್ಷದಲ್ಲಿ 730 ಬಸ್ಸುಗಳನ್ನು ಪೂರೈಸಲಾಗುತ್ತದೆ. ಅದರಲ್ಲಿ 400 ಬಸ್ಸುಗಳನ್ನು ಗ್ರಾಮೀಣ ಭಾಗಕ್ಕೆ, ಉಳಿದ ಬಸ್ಸುಗಳನ್ನು ನಗರ ಸಾರಿಗೆಗೆ ಬಳಸಿಕೊಳ್ಳುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು. ಸಾರಿಗೆ ಸಂಸ್ಥೆಯಲ್ಲಿ ಬಸ್ ಚಾಲಕರು ಹಾಗೂ ನಿರ್ವಾಹಕರಿಗೆ ಕಿರುಕುಳ ಹೆಚ್ಚಾಗಿರುವ ಆರೋಪ ಬಂದಿರುವುದರಿಂದ ಇದನ್ನು ತಪ್ಪಿಸಲು ನೂತನ ಪದ್ಧತಿ ಜಾರಿಗೊಳಿಸಲಾಗುತ್ತದೆ. 8 ಲಕ್ಷ ಕಿ.ಮೀ. ದೂರ ಓಡಿದ ವಾಹನ ರದ್ದುಪಡಿಸಿ ಹೊಸ ವಾಹನ ನೀಡುವಂತೆ ಸಲಹೆ ನೀಡಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement