ಎಂಪಿ ಚುನಾವಣೆ ಏಪ್ರಿಲ್ 16ರಿಂದ ಮೇ 16 ರವರೆಗೆ?
ಏಪ್ರಿಲ್ 16 ರಿಂದ ಮೇ 16 ರವರೆಗೆ ಲೋಕಸಭೆಗೆ ಚುನಾವಣೆ ನಡೆಯುವ ಸಾಧ್ಯತೆಗಳು ಹೆಚ್ಚಿವೆ. ಬುಧವಾರ ಕೇಂದ್ರ ಚುನಾವಣಾ ಆಯೋಗ ಈ ಸಂಬಂಧ...
ನವದೆಹಲಿ: ಏಪ್ರಿಲ್ 16 ರಿಂದ ಮೇ 16 ರವರೆಗೆ ಲೋಕಸಭೆಗೆ ಚುನಾವಣೆ ನಡೆಯುವ ಸಾಧ್ಯತೆಗಳು ಹೆಚ್ಚಿವೆ. ಬುಧವಾರ ಕೇಂದ್ರ ಚುನಾವಣಾ ಆಯೋಗ ಈ ಸಂಬಂಧ ಅಧಿಕೃತವಾಗಿ ವೇಳಾಪಟ್ಟಿ ಪ್ರಕಟಿಸಲಿದೆ. ಮೂಲಗಳ ಪ್ರಕಾರ ಈ ದಿನಾಂಕದೊಳಗೆ ಚುನಾವಣೆ ನಡೆಯುವ ಸಂಭವವಿದೆ ಎಂದು ಹೇಳಲಾಗಿದೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ಚುನಾವಣಾ ಆಯೋಗದ ಪತ್ರಿಕಾಗೋಷ್ಠಿ ನಡೆಯಲಿದೆ. ಇಬ್ಬರು ಚುನಾವಣಾ ಆಯುಕ್ತರ ಜತೆಗೂಡಿ ಮುಖ್ಯ ಚುನಾವಣಾ ಆಯುಕ್ತ ವಿ.ಎಸ್. ಸಂಪತ್ ಅವರು ಚುನಾವಣಾ ದಿನಾಂಕವನ್ನು ಘೋಷಿಸಲಿದ್ದಾರೆ. ದಿನಾಂಕ ಘೋಷಣೆಯಾದ ಮರುಕ್ಷಣವೇ ದೇಶಾದ್ಯಂತ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಅದಾದ ಬಳಿಕ ಸರ್ಕಾರ ಯಾವುದೇ ನೀತಿ ನಿರ್ಧಾರಗಳನ್ನು ಘೋಷಿಸುವಂತಿಲ್ಲ. ಏಪ್ರಿಲ್ ಎರಡನೇ ಅಥವಾ ಮೂರನೇ ವಾರದಲ್ಲಿ ಅಂದರೆ ಏ.7ರಿಂದ 16ರ ನಡುವೆ ಮತದಾನ ಆರಂಭವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸಂಭಾವ್ಯ ವೇಳಾಪಟ್ಟಿ
ಏಪ್ರಿಲ್ 16 124
ಏಪ್ರಿಲ್ 22/23 141
ಏಪ್ರಿಲ್ 30 107
ಮೇ 7 85
ಮೇ 13 86
ಫಲಿತಾಂಶ ಮೇ 16