ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಗಣಿ ಕಂಪನಿಗಳಿಗೆ ರಾಜ್ಯ ಸರ್ಕಾರದ ಗಾಳ

50 ಸಾವಿರ ಮೆಟ್ರಿಕ್ ಟನ್‌ಗಿಂತ ಕಡಿಮೆ ಪ್ರಮಾಣದಲ್ಲಿ ಅದಿರು ಕಳ್ಳ ಸಾಗಣೆ ಮಾಡಿ ತನಿಖಾ ವ್ಯಾಪ್ತಿಯಿಂದ ತಪ್ಪಿಸಿಕೊಂಡಿರುವ ಟ್ರಾನ್ಸ್‌ಪೋರ್ಟರ್ ಹಾಗೂ ಗಣಿ...

Vishwanath S
Updated On : 5 Mar 2014, 1:08 am

ಬೆಂಗಳೂರು: 50 ಸಾವಿರ ಮೆಟ್ರಿಕ್ ಟನ್‌ಗಿಂತ ಕಡಿಮೆ ಪ್ರಮಾಣದಲ್ಲಿ ಅದಿರು ಕಳ್ಳ ಸಾಗಣೆ ಮಾಡಿ ತನಿಖಾ ವ್ಯಾಪ್ತಿಯಿಂದ ತಪ್ಪಿಸಿಕೊಂಡಿರುವ ಟ್ರಾನ್ಸ್‌ಪೋರ್ಟರ್ ಹಾಗೂ ಗಣಿ ಕಂಪನಿಗಳಿಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (ಎಸ್‌ಐಟಿ ) ಮೊದಲು ತನಿಖಾ ಕುಣಿಕೆ ಎಸೆಯಲಿದೆ.
ಹೀಗಾಗಿ ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಸಿಬಿಐ ತನಿಖೆಯಿಂದ ತಪ್ಪಿಸಿಕೊಂಡಿದ್ದ ಗಣಿ ಲೂಟಿಕೋರರನ್ನು ಈಗ ರಾಜ್ಯ ಸರ್ಕಾರದ ಎಸ್‌ಐಟಿ ವಿಚಾರಣೆಗೆ ಒಳಪಡಿಸಲು ನಿರ್ಧರಿಸಿದೆ. ಈ ರೀತಿ 50 ಸಾವಿರ ಮೆಟ್ರಿಕ್ ಟನ್‌ಗಿಂತ ಕಡಿಮೆ ಮೊತ್ತದಲ್ಲಿ ಅದಿರು ಕಳ್ಳ ಸಾಗಣೆ ಮಾಡಿದ್ದ 47 ಸಂಸ್ಥೆಗಳನ್ನು ಗುರುತಿಸಲಾಗಿದ್ದು, ಇವೆಲ್ಲವುಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲು ನಿರ್ಧರಿಸಲಾಗಿದೆ. ಇದಕ್ಕೆ ಸಚಿವ ಸಂಪುಟ ಉಪಸಮಿತಿಯಿಂದಲೂ ಒಪ್ಪಿಗೆ ಲಭಿಸಿದೆ.
ಆದರೆ ಈ ರೀತಿ ರಾಜ್ಯ ಸರ್ಕಾರ ನಡೆಸುವ ತನಿಖೆಯ ಏಟು ಆಡಳಿತಾರೂಢ ಕಾಂಗ್ರೆಸ್‌ನ ಕೆಲ ಶಾಸಕರಿಗೆ ಬೀಳುವ ಸಾಧ್ಯತೆ ಇದೆ. ಈ ನಡುವೆ ಎಂಎಂಎಲ್ ಮೂಲಕ ನಡೆದ ಅಕ್ರಮ ಗಣಿಗಾರಿಕೆಗೆ ಕಾರಣರಾದ ನಿವೃತ್ತ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನೂ ಎಸ್‌ಐಟಿ ತನಿಖಾ ವ್ಯಾಪ್ತಿಗೆ ತರಲು ನಿರ್ಧರಿಸಿದ ಬೆನ್ನಲ್ಲೇ ಲೋಕಾಯುಕ್ತ ವರದಿಯಲ್ಲಿ ಉಲ್ಲೇಖಗೊಂಡ ಅಧಿಕಾರಿಗಳ ವಿರುದ್ಧ ತೆಗೆದುಕೊಂಡ ಶಿಸ್ತುಕ್ರಮದ ಬಗ್ಗೆ ಸರ್ಕಾರ ಮಾಹಿತಿ ತರಿಸಿಕೊಳ್ಳಲು ನಿರ್ಧರಿಸಿದೆ.
ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ಇಲಾಖೆ ಸಚಿವ ಎಚ್.ಕೆ.ಪಾಟೀಲ್ ಅಧ್ಯಕ್ಷತೆಯಲ್ಲಿ ರಚಿಸಿರುವ ಸಂಪುಟ ಉಪಸಮಿತಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement