ಪಿತ್ರೋಡ, ದೇವನೂರು, ಪುಟ್ಟಸ್ವಾಮಿ ಗೌಡಗೆ ಮೈಸೂರು ವಿವಿ ಗೌಡಾ
ಹಿರಿಯ ಸಾಹಿತಿ ದೇವನೂರು ಮಹಾದೇವ, ಸ್ಯಾಮ್ ಪಿತ್ರೋಡ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ವೈ.ಕೆ. ಪುಟ್ಟಸ್ವಾಮಿಗೌಡ ಅವರಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಲಾಗಿದೆ.
ಮೈಸೂರು: ಮೈಸೂರು ವಿವಿಯ 98ನೇ ಘಟಿಕೋತ್ಸವವು ಮಾ.22 ರಂದು ನಡೆಯಲಿದ್ದು, ಹಿರಿಯ ಸಾಹಿತಿ ದೇವನೂರು ಮಹಾದೇವ, ಜ್ಞಾನ ಆಯೋಗದ ಮಾಜಿ ಅಧ್ಯಕ್ಷ ಸ್ಯಾಮ್ ಪಿತ್ರೋಡ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ವೈ.ಕೆ. ಪುಟ್ಟಸ್ವಾಮಿಗೌಡ ಅವರಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಲಾಗಿದೆ. ಪದವಿಗಳನ್ನು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಪ್ರದಾನ ಮಾಡಿದರೆ, ಸ್ಯಾಮ್ ಪಿತ್ರೋಡ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಕುಲಪತಿಗಳು ತಿಳಿಸಿದ್ದಾರೆ. ಈ ಹಿಂದೆ ದೇವನೂರು ಮಹಾದೇವ್ ಅವರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್ ಘೋಷಿಸಿತ್ತು. ಆದರೆ, ಅದನ್ನು ಅವರು ನಿರಾಕರಿಸಿದ್ದರು.