ದಾಖಲೆ ಸೇರ್ಪಡೆ
ಬೆಂಗಳೂರು: ಫೆಬ್ರವರಿ 1ರಂದು ರಾಜ್ಯ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಿಸಿ ಆದೇಶ ಹೊರಡಿಸಿತ್ತು. ಇದಾದ ನಂತರವೂ ಹೊಸ ಅರ್ಜಿ ಸ್ವೀಕಾರಕ್ಕೆ ಅಭಿಯಾನ ಆರಂಭಿಸಲಾಗಿತ್ತು. ಇಲ್ಲಿಯವರೆಗೆ 13.10 ಲಕ್ಷ ಹೊಸ ಅರ್ಜಿಗಳು ಬಂದಿದ್ದು, ಈ ಪೈಕಿ 79800 ಹೊಸ ಅರ್ಜಿಗಳಾಗಿವೆ. ಮಾರ್ಚ್ 26ರವರೆಗೆ ಪರಿಷ್ಕರಣೆ ಕಾರ್ಯ ನಡೆಯಲಿದ್ದು, ಮುಂದಿನ 10 ದಿನಗಳ ಕಾಲ ಸ್ಥಳ ಪರಿಶೀಲನೆ ಹಾಗೂ ಆಕ್ಷೇಪ ಸಲ್ಲಿಕೆಗೆ ಅವಕಾಶವಿದೆ. ಯಾವುದೇ ಕಾರಣಕ್ಕೂ ಹೊಸ ಅರ್ಜಿ ಸ್ವೀಕರಿಸುವುದಕ್ಕೆ ಗಡುವು ವಿಸ್ತರಿಸುವುದಿಲ್ಲ ಎಂದರು.
ನಾಳೆಯಿಂದ ನಾಮಪತ್ರ: ನಾಮಪತ್ರ ಸ್ವೀಕಾರ ಪ್ರಕ್ರಿಯೆ ಆರಂಭಿಸುವುದಕ್ಕೆ ಜಿಲ್ಲಾ ಚುನಾವಣಾಧಿಕಾರಿಗಳು ಮಾ.19ರಂದು ಅಧಿಸೂಚನೆ ಹೊರಡಿಸುತ್ತಾರೆ. ಮಾ.26ರವರೆಗೆ ಈ ಪ್ರಕ್ರಿಯೆ ನಡೆಯಲಿದೆ.