ಭೋಪಾಲ್ನಿಂದ ಸ್ಪರ್ಧೆ
ನವದೆಹಲಿ: ಬಿಜೆಪಿಯ ಹಿರಿಯ ತಲೆಯಾಳು ಎಲ್.ಕೆ.ಆಡ್ವಾಣಿ ಗುಜರಾತ್ನ ಗಾಂಧಿನಗರ ಅಥವಾ ಮಧ್ಯಪ್ರದೇಶ ರಾಜಧಾನಿ ಭೋಪಾಲ್ನಿಂದ ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ.
ಇದೇ ವೇಳೆ ಸದ್ಯ ವಾರಾಣಸಿ ಕ್ಷೇತ್ರದಿಂದ ಕಣಕ್ಕೆ ಇಳಿದಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅಹಮದಾಬಾದ್ ಪೂರ್ವದಿಂದಲೂ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಆಡ್ವಾಣಿಯವರ ಆಪ್ತರ ಪ್ರಕಾರ ಅವರು ಹಾಲಿ ಗಾಂಧಿನಗರದಿಂದ ಸ್ಪರ್ಧಿಸಲು ಒಲವು ತೋರಿದ್ದಾರೆ. ಆದರೆ ಭೋಪಾಲ್ನ ಹಾಲಿ ಸಂಸದರಾಗಿರುವ ಕೈಲಾಶ್ ಜೋಶಿ ಈ ಬಾರಿ ಸ್ಪರ್ಧಿಸಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಡ್ವಾಣಿಯವರನ್ನು ಭೋಪಾಲ್ನಿಂದ ಸ್ಪರ್ಧಿಸುವಂತೆ ಆಹ್ವಾನಿಸಿದ್ದಾರೆ ಎಂದು ಹೇಳಲಾಗಿದೆ.