ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಎಜಿ ರವಿವರ್ಮಕುಮಾರ್ ರಾಜಿನಾಮೆ ಹಿಂದಕ್ಕೆ

Mainashree
Updated On : 19 Mar 2014, 11:06 am

ಬೆಂಗಳೂರು:  ಜಲ ವಿವಾದಗಳಿಗೆ ಸಂಬಂಧಿಸಿದ ನ್ಯಾಯಾಧಿಕರಣಕ್ಕೆ ವಕೀಲರ ನೇಮಕ ಪ್ರಕ್ರಿಯೆಯಲ್ಲಿ ಸರ್ಕಾರ ತಮ್ಮನ್ನು ಸಂಪರ್ಕಿಸಿಲ್ಲ ಎಂದು ಅಸಮಾಧಾನಗೊಂಡು ನೀಡಿದ್ದ ರಾಜಿನಾಮೆಯನ್ನು ರಾಜ್ಯದ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮಕುಮಾರ್ ಅವರು ಹಿಂಪಡೆದಿದ್ದಾರೆ.
ಕಾವೇರಿ, ಕೃಷ್ಣಾ ಹಾಗೂ ಮಹಾದಾಯಿ ನ್ಯಾಯಾಧಿಕರಣಗಳಲ್ಲಿ ಸರ್ಕಾರವನ್ನು ಪ್ರತಿನಿಧಿಸಲು ನೇಮಿಸಿರುವ ವಕೀಲರ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ರವಿವರ್ಮಕುಮಾರ್ ಅವರನ್ನು ಮನವೊಲಿಸುವಲ್ಲಿ ಸರ್ಕಾರ ಸಫಲವಾಗಿದೆ. ರವಿವರ್ಮಕುಮಾರ್ ಅವರ ಅಸಮಾಧಾನಕ್ಕೆ ಕಾರಣರಾಗಿದ್ದ ವಕೀಲರಾದ ಶಶಿಕಿರಣ್ ಶೆಟ್ಟಿ ಹಾಗೂ ನಿಶಾಂತ ಪಾಟೀಲ್ ಅವರು ನ್ಯಾಯಾಧಿಕರಣದ ವಕೀಲರ ತಂಡದಿಂದ ರಾಜೀನಾಮೆ ನೀಡಿದ್ದಾರೆ.
ಅಲ್ಲದೆ, ಕಾನೂನು ಸಚಿವ ಜಯಚಂದ್ರ ಹಾಗೂ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ರವಿವರ್ಮಕುಮಾರ್ ಅವರನ್ನು ಭೇಟಿ ಮಾಡಿ ಮನವೊಲಿಸಿದರು. ಇದರ ಪರಿಣಾಮವಾಗಿ ರವಿವರ್ಮಕುಮಾರ್ ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement