ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ತಲೆಬಿಸಿ ತಂದಿದೆ 'ನೋಟಾ'

Mainashree
Updated On : 19 Mar 2014, 11:39 am

ನವದೆಹಲಿ: ಹಲವು ಸಂಕಷ್ಟಗಳಿಗೆ ಸಿಲುಕಿರುವ ತಮ್ಮ ನೆರವಿಗೆ ಧಾವಿಸದಿದ್ದರೆ ಮತದಾನದಲ್ಲಿ ನೋಟಾ ಆಯ್ಕೆ ಬಳಸುವುದಾಗಿ ಎಚ್ಚರಿಕೆ ನೀಡಿದ್ದ ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ ರೈತರ ಮನವೊಲಿಸಲು ಬಿಜೆಪಿ ಮತ್ತು ಕಾಂಗ್ರೆಸ್ ಮುಂದಾಗಿವೆ.
ಚಾಯ್ ಪೆ ಚರ್ಚಾ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ ಯಾವತ್‌ಮಲ್ ಜಿಲ್ಲೆಯ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ಇತ್ತೀಚೆಗೆ ಸಂಭವಿಸಿದ ಆಲಿಕಲ್ಲು ಮಳೆಯಿಂದ ಜಿಲ್ಲೆಯ ರೈತರು ಭಾರಿ ಪ್ರಮಾಣದಲ್ಲಿ ಬೆಳೆಹಾನಿ ಅನುಭವಿಸಿದ್ದರು.
ಮಹಾರಾಷ್ಟ್ರ ಮಾತ್ರವಲ್ಲ, ದೇಶದ 33 ಜಿಲ್ಲೆಗಳ ರೈತರೊಂದಿಗೆ ಮೋದಿ ಸಂವಾದ ನಡೆಸಲಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ 400 ರೈತರ ಕುಟುಂಬಗಳ ಜತೆಯೂ ಮಾತನಾಡಲಿದ್ದಾರೆ ಎಂದು ಬಿಜೆಪಿ ಮುಖಂಡ ದೇವೇಂದ್ರ ಫಟ್ನವಿಸ್ ಹೇಳಿದ್ದಾರೆ.
ಮೋದಿ ಕಾರ್ಯಕ್ರಮ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಮಹಾರಾಷ್ಟ್ರದ ಮುಖ್ಯಮಂತ್ರಿ ಪೃಥ್ವಿರಾಜ್ ಚವ್ಹಾಣ್, ನಿಮ್ಮೊಂದಿಗೆ ನಾವಿದ್ದೇವೆ. ನೀವು ಅಸಹಾಯಕರು ಎಂದು ಭಾವಿಸಿಕೊಳ್ಳಬೇಕಿಲ್ಲ. ಭಾವುಕತೆಯ ಆವೇಶಕ್ಕೆ ಒಳಗಾಗಬೇಡಿ. ನಮ್ಮಿಂದ ಸಾಧ್ಯವಿರುವ ನೆರವು ನೀಡುತ್ತೇವೆ ಎಂದು ರೈತರಲ್ಲಿ ಮನವಿ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement