ಮಲೇಷ್ಯಾ ವಿಮಾನ ಪತನ
2 ವಾರಗಳ ಹಿಂದೆ ಕಣ್ಮರೆಯಾಗಿದ್ದ ಮಲೇಷ್ಯಾ ವಿಮಾನ ಹಿಂದೂಮಹಾಸಾಗರದಲ್ಲಿ ಪತನ
ಕೌಲಾಲಂಪುರ: 2 ವಾರಗಳ ಹಿಂದೆ ನಿಗೂಢವಾಗಿ ಕಣ್ಮರೆಯಾಗಿದ್ದ ಮಲೇಷ್ಯಾ ವಿಮಾನ ಹಿಂದೂಮಹಾಸಾಗರದಲ್ಲಿ ಪತನಗೊಂಡಿದೆ. ಅದರಲ್ಲಿದ್ದ ಪ್ರಯಾಣಿಕರು, ಸಿಬ್ಬಂದಿ ಸೇರಿ ಎಲ್ಲ 239 ಮಂದಿಯೂ ಜಲಸಮಾಧಿಯಾಗಿದ್ದಾರೆ. ಮಲೇಷ್ಯಾ ಪ್ರಧಾನಿ ನಜೀಬ್ ರಜಾಕ್ ಸೋಮವಾರ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಈ ಮೂಲಕ ನಾಪತ್ತೆಯಾಗಿದ್ದ ವಿಮಾನದ ಬಗ್ಗೆ ಎದ್ದಿದ್ದ ಎಲ್ಲ ಊಹಾಪೋಹಗಳಿಗೂ ತೆರೆಬಿದ್ದಿದೆ.
ನಿಗೂಢವಾಗಿ ನಾಪತ್ತೆಯಾಗಿದ್ದ ವಿಮಾನದ ಶೋಧ ಕಾರ್ಯಾಚರಣೆ ಕೈಗೊಂಡಿದ್ದ ತಜ್ಞರು ವಿಮಾನ ಪತನವಾಗಿದೆ ಎಂಬ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಪ್ರಯಾಣಿಕರೆಲ್ಲರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪ್ರಯಾಣಿಕರ ಸಂಬಂಧಿಕರಿಗೆ ಮಾಹಿತಿ ರವಾನಿಸಲಾಗಿದೆ. ಅಲ್ಲದೆ ಮಲೇಷ್ಯಾ ವಿಮಾನ ಪತನವಾಗಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ವಿಮಾನಕ್ಕಾಗಿ ಶೋಧ ಕಾರ್ಯ ಮುಂದುವರೆಸುವುದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ.
ಮಾರ್ಚ್ 8 ರಂದು ಕೌಲಾಲಂಪುರದಿಂದ ಬೀಜಿಂಗ್‌ನತ್ತ ಪ್ರಯಾಣಿಸಿದ್ದಿ ಮಲೇಷ್ಯಾ ಎಂ.ಹೆಚ್ 370 ಬೋಯಿಂಗ್ ವಿಮಾನ ನಿಗೂಢವಾಗಿ ನಾಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸುಮಾರು 25 ದೇಶಗಳು ಶೋಧ ಕಾರ್ಯದಲ್ಲಿ ತೊಡಗಿಕೊಂಡಿದ್ದವು.