ಗಲಭೆಗೆ ಅಖಿಲೇಶ್ ಹೊಣೆ
ಮುಜಾಫರ್ನಗರ ಕೋಮುಗಲಭೆಗೆ ಅಖಿಲೇಶ್ ಯಾದವ್ ಸರ್ಕಾರವೇ ಕಾರಣವೆಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು...
ನವದೆಹಲಿ: ಮುಜಾಫರ್ನಗರ ಕೋಮುಗಲಭೆಗೆ ಅಖಿಲೇಶ್ ಯಾದವ್ ಸರ್ಕಾರವೇ ಕಾರಣವೆಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಗಲಭೆಗೆ ಸಂಬಂಧಿಸಿ ಸಿಬಿಐ ಅಥವಾ ಎಸ್ಐಟಿ ತನಿಖೆಗೆ ನಿರ್ದೇಶನ ನೀಡಬೇಕೆನ್ನುವ ಆಗ್ರಹವನ್ನು ಕೋರ್ಟ್ ತಳ್ಳಿಹಾಕಿದೆ.
ಮುಜಾಫರ್ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಕೋಮುಗಲಭೆ ಹರಡದಂತೆ ತಡೆಯುವಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ. ಆದರೆ, ಗಲಭೆಗೆ ಸಂಬಂಧಿಸಿದ ತನಿಖೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಥವಾ ಎಸ್ಐಟಿ ತನಿಖೆ ಅಗತ್ಯ ಇಲ್ಲ ಎಂಬ ಅಭಿಪ್ರಾಯಕ್ಕೆ ನ್ಯಾಯಾಲಯ ಬಂದಿದೆ. ಗಲಭೆಗೆ ಸಂಬಂಧಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಾಲಯ ಈ ವಿಚಾರ ತಿಳಿಸಿದೆ. ಇದೇ ವೇಳೆ ಗಲಭೆ ನಿರಾಶ್ರಿತರಿಗೆ ನ್ಯಾಯ ಒದಗಿಸಿಕೊಡಬೇಕು, ಅತ್ಯಾಚಾರಕ್ಕೊಳಗಾದ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದೂ ಸರ್ಕಾರಕ್ಕೆ ನಿರ್ದೇಶನ ನೀಡಿದೆ.