ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದಿನಿಂದ

ಶುಕ್ರವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗುತ್ತಿದೆ. ಮಾ.28ರಿಂದ ಏ.9ರವರೆಗೆ ನಡೆಯುವ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ...

Rashmi Kasaragodu
Updated On : 28 Mar 2014, 1:55 am

ಬೆಂಗಳೂರು: ಶುಕ್ರವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗುತ್ತಿದೆ. ಮಾ.28ರಿಂದ ಏ.9ರವರೆಗೆ ನಡೆಯುವ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ಒಟ್ಟು 8,26,279 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಒಟ್ಟು 3016 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದ್ದು ಸುಮಾರು 51 ಸಾವಿರ ಪರೀಕ್ಷಾ ವಿಚಕ್ಷಕರನ್ನು ನೇಮಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿಯೂ 15ಕ್ಕೂ ಅಧಿಕ ವಿಚಕ್ಷಕರನ್ನು ನೇಮಿಸಲಾಗಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ. ತಾಲೂಕು ಹಾಗೂ ಜಿಲ್ಲಾ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ವಿಚಕ್ಷಣ ದಳ ಕೂಡ ರಚಿಸಲಾಗಿದೆ. 163 ಸೂಕ್ಷ್ಮ ಹಾಗೂ 51 ಅತಿ ಸೂಕ್ಷ್ಮ ಕೇಂದ್ರಗಳನ್ನು ಮಂಡಳಿ ಗುರುತಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement