ಕಲ್ಲಿದ್ದಲು ಹಗರಣ: ಸಿಬಿಐನಿಂದ 8 ತಾಸು ಪಾರಖ್ ವಿಚಾರಣೆ
ನವದೆಹಲಿ: ಕಲ್ಲಿದ್ದಲು ಖಾತೆ ನಿವೃತ್ತ ಕಾರ್ಯದರ್ಶಿ ಪಿ.ಸಿ.ಪಾರಖ್ ಅವರನ್ನು ಸಿಬಿಐ ಗುರುವಾರ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿತು. ಒಡಿಶಾದಲ್ಲಿ ಹಿಂಡಾಲ್ಕೋ ಕಂಪನಿಗೆ ಕಲ್ಲಿದ್ದಲು ಬ್ಲಾಕ್ಗಳನ್ನು ಹಂಚಿಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈ ವಿಚಾರಣೆ ನಡೆದಿದೆ.
ಶುಕ್ರವಾರ ಮತ್ತೆ ಅವರನ್ನು ವಿಚಾರಣೆಗೆ ಕರೆಸಲಾಗುತ್ತದೆ ಎಂದು ತನಿಖಾ ಸಂಸ್ಥೆ ಮೂಲಗಳು ಖಚಿತಪಡಿಸಿವೆ.
ಪಾರಖ್ ಅವರನ್ನು ಡಿವೈಎಸ್ಪಿ ದರ್ಜೆಯ ಅಧಿಕಾರಿಯೊಬ್ಬರ ನೇತೃತ್ವದ ತಂಡ ಅವರನ್ನು ವಿಚಾರಣೆಗೆ ಒಳಪಡಿಸಿತು.
ಸಿಬಿಐ ಮೇಲುಸ್ತುವಾರಿಯಲ್ಲಿ ನಡೆಯಲಿ: ಕಲ್ಲಿದ್ದಲು ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ನಾಗಪುರ ಮೂಲದ ಎಎಂಆರ್ ಐಯರ್ನ್ ಆ್ಯಂಡ್ ಸ್ಟೀಲ್ ಪೈ.ಲಿ ವಿಶೇಷ ಕೋರ್ಟ್ಗೆ ಮನವಿ ಸಲ್ಲಿಸಿದೆ. ಹಗರಣದ ತನಿಖೆ ಸುಪ್ರೀಂಕೋರ್ಟ್ ಮೇಲುಸ್ತುವಾರಿಯಲ್ಲಿ ಸಿಬಿಐ ತನಿಖೆ ನಡೆಯಬೇಕೆಂದು ಅದು ಅರ್ಜಿಯಲ್ಲಿ ಪ್ರತಿಪಾದಿಸಿದೆ. ಈ ಸಂಸ್ಥೆ ವಿರುದ್ಧವೂ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ. ಮೇ 7ರಂದು ವಿಶೇಷ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಲಿದೆ.