ಬಾಬಾ ರಾಮದೇವ್ ವಿರುದ್ಧ ಕೇಸು
ಯೋಗ ಗುರು ಬಾಬಾ ರಾಮದೇವ್ ವಿರುದ್ಧ ಮೈಸೂರಿನ ಕೃಷ್ಣರಾಜ ಪೊಲೀಸ್...
ಮೈಸೂರು: ಯೋಗ ಗುರು ಬಾಬಾ ರಾಮದೇವ್ ವಿರುದ್ಧ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಎಸ್ಸಿ, ಎಸ್ಟಿ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಾಬಾ ರಾಮದೇವ್ ಉತ್ತರಪ್ರದೇಶದ ಲಕ್ನೋದಲ್ಲಿ ದಲಿತ ಮಹಿಳೆಯರ ಬಗ್ಗೆ ಕೀಳಾಗಿ ಹಾಗೂ ಅವಮಾನವೀಯ ಹೇಳಿಕೆ ನೀಡಿದ್ದಾರೆ. ಇದರಿಂದ ನಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಸಾರ್ವಜನಿಕವಾಗಿ ದಲಿತ ಸಮಾಜವನ್ನು ಅಣಕ ಮಾಡಲು ಹೊರಟಿರುವ ಬಾಬಾ ರಾಮದೇವ್ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಕರ್ನಾಟಕ ದಲಿತ ವೆಲ್ಫೇರ್ ಟ್ರಸ್ಟ್ನ ಅಧ್ಯಕ್ಷ ಶಾಂತರಾಜು ಬುಧವಾರ ಸಂಜೆ 7.30ಕ್ಕೆ ದೂರು ನೀಡಿದ್ದಾರೆ. ಈ ಸಂಬಂಧ ಕೆ.ಆರ್. ಠಾಣೆಯ ಇನ್ಸ್ಪೆಕ್ಟರ್ ಎಚ್. ಪರಶುರಾಮಪ್ಪ ಅವರು ಎಸ್ಸಿ, ಎಸ್ಟಿ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಬಾಬಾ ರಾಮದೇವ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.