ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ವರ್ಷದ ಆಡಳಿತ ಸಮಾಧಾನ ತಂದಿದೆ

ಒಂದು ವರ್ಷದ ಆಡಳಿತ ಸಮಾಧಾನ ತಂದಿದೆ. ಅದ್ಧೂರಿಯಾಗಿ ಆಚರಣೆ ಮಾಡುವುದಿಲ್ಲ. ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ...

Rashmi Kasaragodu
Updated On : 13 May 2014, 12:56 pm

ಕ.ಪ್ರ. ವಾರ್ತೆ  ಮೈಸೂರು ಮೇ 12
ಒಂದು ವರ್ಷದ ಆಡಳಿತ ಸಮಾಧಾನ ತಂದಿದೆ. ಅದ್ಧೂರಿಯಾಗಿ ಆಚರಣೆ ಮಾಡುವುದಿಲ್ಲ. ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸರ್ಕಾರದ ಸಾಧನೆಯನ್ನು ಪುಸ್ತಕದ ರೂಪದಲ್ಲಿ ತರಲಾಗುವುದು.
ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಈ ರೀತಿ ಉತ್ತರಿಸಿದರು.
ಟಿ ನಿಮ್ಮ ಸರ್ಕಾರ ಒಂದು ವರ್ಷ ಪೂರೈಸಿರುವುದು ತೃಪ್ತಿ ತಂದಿದೆಯೇ?
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಮುಗಿದಿದೆ. ನನ್ನ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿರುವುದು ಸಮಾಧಾನ ತಂದಿದೆ. ಎಲ್ಲ ಸಚಿವರೂ ಕೆಲಸ ಮಾಡಿದ್ದಾರೆ. ಈ ಅವಧಿಯ ಆಡಳಿತ ಖುಷಿ ಕೊಟ್ಟಿದೆ. ಇನ್ನೂ ಹೆಚ್ಚಿನ ಕೆಲಸ ಮಾಡಬೇಕೆಂಬ ತುಡಿತ ಇದೆ.
ಟಿ ಒಂದು ವರ್ಷವನ್ನು ಸಂಭ್ರಮದಿಂದ ಆಚರಿಸುತ್ತೀರಾ?
ಸಂಭ್ರಮದಿಂದ ಆಚರಿಸುವುದಿಲ್ಲ. ಬದಲಿಗೆ ಮೇ 19 ರಂದು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸರ್ಕಾರದ ಸಾಧನೆಗಳನ್ನು ಪುಸ್ತಕದ ರೂಪದಲ್ಲಿ ಸಿದ್ಧಪಡಿಸಿ ಬಿಡುಗಡೆ ಮಾಡಲಾಗುವುದು.
ಟಿ ಬಿಜೆಪಿ ಸರ್ಕಾರದ ನಂತರ ನಿಮ್ಮ ಸಾಧನೆ ಏನು?
ಬಿಜೆಪಿ ಸರ್ಕಾರವು ಸೈಕಲ್ ಕೊಟ್ಟದ್ದು ಬಿಟ್ಟರೇ ಬೇರೆ ಯಾವ ಕಾರ್ಯಕ್ರಮವನ್ನೂ ಜಾರಿಗೊಳಿಸಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅನ್ನಭಾಗ್ಯ, ಕ್ಷೀರಭಾಗ್ಯ, ಸಾಲಮನ್ನಾ, ವಿದ್ಯಾಸಿರಿ, ಮನಸ್ವಿನಿ, ಮೈತ್ರಿ ಸೇರಿದಂತೆ ಹಲವು ಯೋಜನೆಗಳನ್ನು ಬಡವರು ಮತ್ತು ರೈತರ ಅನುಕೂಲಕ್ಕಾಗಿ ತಂದಿದ್ದೇವೆ. ನಮ್ಮ ಯೋಜನೆಗಳನ್ನು ಜನ ಮೆಚ್ಚಿಕೊಂಡಿದ್ದಾರೆ ಎಂದು ಭಾವಿಸಿದ್ದೇನೆ.
ಟಿ ರಾಜ್ಯದ ಹಣಕಾಸು ಸ್ಥಿತಿ ಹೇಗಿದೆ?
ಸದ್ಯ ರಾಜ್ಯದ ಹಣಕಾಸು ಪರಿಸ್ಥಿತಿ ಸುಧಾರಿಸಿದೆ. ಮತ್ತಷ್ಟು ಸುಧಾರಿಸಬೇಕಿದೆ.
ಟಿ ನಿಮ್ಮ ಸಚಿವರ ಸಾಧನೆ ಏನು?
ಇಲಾಖಾವಾರು ಸಾಧನೆ ಪಟ್ಟಿ ಕೇಳಿದ್ದೇನೆ. ಸಚಿವರ ಸಾಧನೆಯನ್ನು ಪ್ರತ್ಯೇಕವಾಗಿ ಪರಾಮರ್ಶೆ ಮಾಡಲಾಗುವುದು. ಸರ್ಕಾರದ ಆಡಳಿತದ ಬಗ್ಗೆ ನಾನು ಮಾರ್ಕ್ಸ್ ಕೊಡುವುದಿಲ್ಲ. ನೀವೆ (ಮಾಧ್ಯಮದವರು) ಮಾರ್ಕ್ಸ್ ಕೊಡಬೇಕು.
ಟಿ ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ ಇದೆಯಾ?
ಲೋಕಸಭೆ ಚುನಾವಣೆ ನೀತಿ ಸಂಹಿತೆ ಸಡಿಲವಾಗಿದ್ದು, ಸಂಭ್ರಮಕ್ಕೆ ಯಾವುದೇ ಅಡ್ಡಿ ಇಲ್ಲ. ಆದರೆ, ನಾವು ಅದ್ಧೂರಿಯಾಗಿ ಆಚರಿಸಬೇಕು ಎಂದು ತೀರ್ಮಾನಿಸಿಲ್ಲ.
ಟಿ ಸಚಿವ ಸಂಪುಟ ವಿಸ್ತರಣೆ ಯಾವಾಗ?
ಲೋಕಸಭೆ ಚುನಾವಣೆ ಫಲಿತಾಂಶ ಬಂದ ಮೇಲೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜೊತೆಗೆ ಚರ್ಚಿಸಲಾಗುವುದು.
ಟಿ ಸಚಿವ ಡಿ.ಕೆ. ಶಿವಕುಮಾರ್ ಅವರೊಂದಿಗೆ ಭಿನ್ನಾಭಿಪ್ರಾಯ ಇದೇಯಾ?
ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಅವರು ಆರೋಪ ಮಾಡಿರುವುದು ಸುಳ್ಳು. ನನ್ನ ಸಚಿವ ಸಂಪುಟದ ಸಹೋದ್ಯೋಗಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ.




ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಮುಗಿದಿದೆ. ನನ್ನ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿರುವುದು ಸಮಾಧಾನ ತಂದಿದೆ. ಎಲ್ಲ ಸಚಿವರೂ ಕೆಲಸ ಮಾಡಿದ್ದಾರೆ. ಈ ಅವಧಿಯ ಆಡಳಿತ ಖುಷಿ ಕೊಟ್ಟಿದೆ. ಇನ್ನೂ ಹೆಚ್ಚಿನ ಕೆಲಸ ಮಾಡಬೇಕೆಂಬ ತುಡಿತ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement