ಕೊನೆಗೂ ಮೋದಿಗೆ ಸೋನಿಯಾ ಅಭಿನಂದನೆ
ಕೊನೆಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಿಯೋಜಿತ ಪ್ರಧಾನಿ ನರೇಂದ್ರ...
ನವದೆಹಲಿ: ಕೊನೆಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಿಯೋಜಿತ ಪ್ರಧಾನಿ ನರೇಂದ್ರ ಮೋದಿಗೆ ಶುಭ ಹಾರೈಸಿದ್ದಾರೆ. ಬಿಜೆಪಿ ನೇತೃತ್ವದ ಮೈತ್ರಿಕೂಟ ಚುನಾವಣೆಯಲ್ಲಿ 336 ಸ್ಥಾನಗಳನ್ನು ಗೆದ್ದಿರುವ ಹಿನ್ನೆಲೆಯಲ್ಲಿ ಸೋನಿಯಾ ಮೋದಿಗೆ ಪತ್ರ ಬರೆದಿದ್ದಾರೆ. ಮೇ 20ರಂದು ಬರೆದಿರುವ ಪತ್ರದಲ್ಲಿ ಬಿಜೆಪಿ ನೇತೃತ್ವದ ಮೈತಿಕೂಟ ಬಹುಮತದಿಂದ ಆಯ್ಕೆಯಾಗಿ ಸರ್ಕಾರ ರಚಿಸುತ್ತಿರುವುದಕ್ಕೆ ಅಭಿನಂದಿಸಿದ್ದಾರೆ. ಚುನಾವಣೆಯಲ್ಲಿ ಗೆದ್ದ ಬಳಿಕ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಮೋದಿಗೆ ಶುಭ ಹಾರೈಸದೆ ಇದ್ದ ಕ್ರಮಕ್ಕೆ ಟೀಕೆ ವ್ಯಕ್ತವಾಗಿತ್ತು.