ಸಿದ್ದರಾಮಯ್ಯರಿಂದ ಆಶೀರ್ವಾದ ಪಡೆದ ಸಂಸದ ಪ್ರತಾಪ್ ಸಿಂಹ
ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ನೂತನ ಸಂಸದ ಪ್ರತಾಪ್ ಸಿಂಹ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಆಶೀರ್ವಾದ ಪಡೆದರು.
ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದ ಸಿದ್ದರಾಮಯ್ಯಅವರ ಬಳಿಗೆ ತೆರಳಿದ ಪ್ರತಾಪ್ ಸಿಂಹ ಅವರು ಕಾಲಿಗೆರಗಿ ಆಶೀರ್ವಾದ ಪಡೆದರು. ನಗುಮುಖದಿಂದ ಪ್ರತಾಪ್ ಸಿಂಹ ಅವರಿಗೆ ಸಿದ್ದರಾಮಯ್ಯ ಅವರು ಶುಭಾಶಯ ಕೋರಿದರು.