ಬಿಎಸ್ವೈಗೆ ರಾಜ್ಯಾಧ್ಯಕ್ಷ ಸ್ಥಾನ ವರಿಷ್ಠರಿಗೆ ಬಿಟ್ಟದ್ದು
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಕ್ಷ ಸಂಘಟನೆಗೆ...
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ಹೇಳಿದ್ದಾರೆಯೇ ಹೊರತು ರಾಜ್ಯಾಧ್ಯಕ್ಷ ಸ್ಥಾನ ಕೇಳಿಲ್ಲ. ಆದರೂ ರಾಜ್ಯಾಧ್ಯಕ್ಷ ಸ್ಥಾನದ ತೀರ್ಮಾನಕೈಗೊಳ್ಳುವುದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರದ ಮುಖಂಡರಿಗೆ ಬಿಟ್ಟ ವಿಚಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಅಂಗವಾಗಿ ನಗರದಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಪದಾಧಿಕಾರಿಗಳ ಹಾಗೂ ಪ್ರಮುಖ ವಿಶೇಷ ಸಭೆ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಜೋಶಿ ಮಾತನಾಡಿದರು. ರಾಜ್ಯದಲ್ಲಿ ಪಕ್ಷ ಸಂಘಟನೆಯ ನೇತೃತ್ವ ವಹಿಸುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಕೇಂದ್ರದ ಮಾಜಿ ಸಚಿವ ಅನಂತಕುಮಾರ್, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ 14 ಸ್ಧಾನ ಗೆದ್ದರೆ ಸಾಕೆಂದು ಬಿಜೆಪಿ ರಾಷ್ಟ್ರೀಯ ಮುಖಂಡರು ಸೂಚಿಸಿದ್ದರು. ಆದರೆ 17 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ನಿರೀಕ್ಷೆ ಮೀರಿ ಸಾಧನೆ ತೋರಿದೆ ಎಂದು ಜೋಶಿ ವಿವರಿಸಿದ್ದಾರೆ.