ಶಾಸಕ ಸ್ಥಾನಕ್ಕೆ ಬಿಎಸ್ವೈ ರಾಜಿನಾಮೆ
ಮಾಜಿ ಮುಖ್ಯಮಂತ್ರಿ, ಸಂಸದ ಬಿ.ಎಸ್.ಯಡಿಯೂರಪ್ಪ ಅವರು ಶಾಸಕ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಸಂಸದ ಬಿ.ಎಸ್.ಯಡಿಯೂರಪ್ಪ ಅವರು ಶಾಸಕ ಸ್ಥಾನಕ್ಕೆ ಭಾನುವಾರ ರಾಜಿನಾಮೆ ನೀಡಿದ್ದಾರೆ. ಸ್ಪೀಕರ್ ಕಚೇರಿಗೆ ಫ್ಯಾಕ್ಸ್ ಮೂಲಕ ರಾಜಿನಾಮೆ ಸಲ್ಲಿಸಿರುವ ಯಡಿಯೂರಪ್ಪ ಅವರು ಮೋದಿ ಪ್ರಮಾಣವಚನಕ್ಕೆ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅವರು ಶಿಕಾರಿಪುರ ಕ್ಷೇತ್ರದಿಂದ ಕೆಜೆಪಿಯಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಬಿಜೆಪಿಯಲ್ಲಿ ಪಕ್ಷ ವಿಲೀನವಾದ ಬಳಿಕ ಬಿಜೆಪಿ ಶಾಸಕಾಂಗ ಪಕ್ಷದ ಸದಸ್ಯರಾಗಿದ್ದರು. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಮೂರೂವರೆ ಲಕ್ಷಕ್ಕೂ ಅಧಿಕ ಮತಗಳಿಂದ ಯಡಿಯೂರಪ್ಪ ಜಯ ಸಾಧಿಸಿದ್ದರು.