ಬಸನಗೌಡ ಯತ್ನಾಳ ಬಂಧನ
ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.
ಬಿಜಾಪುರ: ಬಿಜಾಪುರದಲ್ಲಿ ನಡೆದ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ತಕ್ಷಣ ಕೇಂದ್ರದ ಮಾಜಿ ಸಚಿವ ಯತ್ನಾಳ ಅವರು ಕಣ್ಮರೆಯಾಗಿದ್ದರು. ಬೆಳಗಾವಿ ಉತ್ತರ ವಲಯ ಐಜಿಪಿ ಭಾಸ್ಕರ್ರಾವ್ ಅವರು ಐದು ಪೊಲೀಸ್ ತಂಡಗಳನ್ನು ರಚಿಸಿ ಯತ್ನಾಳ್ ಶೋಧಕ್ಕೆ ಸೂಚಿಸಿದ್ದರು. ಬುಧವಾರ ಬೆಳಗ್ಗೆ ಯತ್ನಾಳ್ ಮಹಾರಾಷ್ಟ್ರದ ಕೊಲ್ಹಾಪುರ ಪೊಲೀಸರ ಮುಂದೆ ಶರಣಾಗತಿ ಇಚ್ಛೆ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.