ಪತಿ, ಅತ್ತೆಯ ಎದುರೇ ಮಹಿಳೆ ಮೇಲೆ ಗ್ಯಾಂಗ್ರೇಪ್
ಸಿಲಿಕಾನ್ ಸಿಟಿಯಲ್ಲಿ ಪತಿ ಹಾಗೂ ಅತ್ತೆಯ..
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪತಿ ಹಾಗೂ ಅತ್ತೆಯ ಎದುರೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಕ್ಟೋಬರ್ 24ರಂದು ಪೊಲೀಸರ ಸೋಗಿನಲ್ಲಿ ದರೋಡೆಗೆ ಬಂದ ನಾಲ್ವರು ದುಷ್ಕರ್ಮಿಗಳು, ಪತಿ ಹಾಗೂ ಅತ್ತೆಯನ್ನು ಕಟ್ಟಿಹಾಕಿ 24 ವರ್ಷದ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ. ಈ ಸಂಬಂಧ ಅಕ್ಟೋಬರ್ 27ರಂದು ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಾದ ನಂದೀಶ್ ಕುಮಾರ್, ಅನಿಲ್ ಕುಮಾರ್, ಸುಜಿತ್ ಕುಮಾರ್ ಹಾಗೂ ಸಿಮಂತ್ ಹಲವು ಸುಲಿಗೆ ಕೇಸ್ಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.