ಪ್ರಧಾನ ಸುದ್ದಿ

ಮಾಜಿ ಎಂಎಲ್ಸಿ ಅಬ್ದುಲ್ ಅಜೀಂ ಬಿಜೆಪಿಗೆ ಸೇರ್ಪಡೆ

Vishwanath S

ಬೆಂಗಳೂರು: ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅಬ್ದುಲ್ ಅಜೀಂ ಬುಧವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಹಾಗೂ ಜಗದೀಶ್ ಶೆಟ್ಟರ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು.

ಈ ವೇಳೆ, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ ಹಾಗೂ ಮಾಜಿ ಸಚಿವೆ ಶೋಭಾ ಕಂರದ್ಲಾಜೆ ಉಪಸ್ಥಿತರಿದ್ದರು.

ಜೆಡಿಎಸ್‌ನ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಪತ್ರದ ಮೂಲಕ ಪಕ್ಷದ ವರಿಷ್ಠ ಎಚ್‌.ಡಿ. ದೇವೇಗೌಡ ಅವರಿಗೆ ರಾಜೀನಾಮೆ ಪತ್ರವನ್ನು ಭಾನುವಾರ ರವಾನಿಸಿದರು.

'13 ವರ್ಷಗಳ ಕಾಲ ನಾನಿದ್ದ ಜೆಡಿಎಸ್‌ ಪಕ್ಷವನ್ನು ತೊರೆದಿದ್ದೇನೆ. ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವ ಇದೆ. ಪಕ್ಷದ ಬಗ್ಗೆ ನಾನು ಯಾವುದೇ ಟೀಕೆ ಮಾಡುವುದಿಲ್ಲ. ಆದರೆ, ಇತ್ತೀಚಿನ ಕೆಲ ಬೆಳವಣಿಗೆಗಳು, ಪಕ್ಷದ ತೀರ್ಮಾನಗಳಿಂದ ನೋವಾಗಿದ್ದರಿಂದ ಪಕ್ಷ ಬಿಡುತ್ತಿರುವುದಾಗಿ ತಿಳಿಸಿದ್ದರು.



SCROLL FOR NEXT