ನವದೆಹಲಿ: ಕೊನೆಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದು, ಈ ಸಂಬಂಧ ಗುರುವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಚರ್ಚಿಸಿದ್ದಾರೆ.
ಸುಧಾರಣೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು ನೀಡಲು ನಿರ್ಧರಿಸಿರುವ ಮೋದಿ, ಇದೇ ಭಾನುವಾರ ತಮ್ಮ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎನ್ನಲಾಗಿದೆ.
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ಬಿಜೆಪಿ ಹಿರಿಯ ನಾಯಕ ಯಶ್ವಂತ್ ಸಿನ್ಹಾ ಪುತ್ರ ಜಯಂತ್ ಸಿನ್ಹಾ ಹಾಗೂ ಕಲ್ಲಿದ್ದಲು ಹಗರಣ ಬಯಲಿಗೆಳೆದ ಖ್ಯಾತಿಯ ಚಂದ್ರಾಪುರ ಸಂಸದ ಹಂಸರಾಜ್ ಅಹಿರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ. ಮೋದಿ ಆಪ್ತರೂ ಆಗಿರುವ ಪರಿಕ್ಕರ್ ಅವರಿಗೆ ರಕ್ಷಣಾ ಹೊಣೆ ವಹಿಸುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ.