ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ಯುವಕನ ಬಂಧನ
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಗೈದ ಆರೋಪದಲ್ಲಿ ಮೂಡಿಗೆರೆ ಪೊಲೀಸರು ಜಮಾಲುದ್ದೀನ್ ...
ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಗೈದ ಆರೋಪದಲ್ಲಿ ಮೂಡಿಗೆರೆ ಪೊಲೀಸರು ಜಮಾಲುದ್ದೀನ್ (21) ಎಂಬಾತನನ್ನು ಬಂಧಿಸಿದ್ದಾರೆ.
ಬುಧವಾರ ಸಂಜೆ ತನ್ನ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು 17ರ ಹರೆಯದ ಬಾಲಕಿ ಮೂಡಿಗೆರೆ ಪೊಲೀಸರಿಗೆ ದೂರು ನೀಡಿದ್ದಳು. ಇಲ್ಲಿನ ಕೃಷ್ಣಾಪುರ ಎಂಬಲ್ಲಿ ಆತ ನನ್ನನ್ನು ಅಪಹರಿಸಿದ್ದು, ನಂತರ ಅತ್ಯಾಚಾರವೆಸಗಿ ಟೌನ್ ಪಂಚಾಯತ್ ಆಫೀಸ್ ಬಳಿ ಬಿಟ್ಟಿದ್ದಾನೆ ಎಂದು ಬಾಲಕಿ ಹೇಳಿದ್ದಾಳೆ.
ಬಾಲಕಿ ಅಂಗಡಿಯೊಂದರಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ದು, ಅಲ್ಲಿಗೆ ಹೋಗುವ ವೇಳೆ ಆರೋಪಿ ತನ್ನ ಕಾರಿನಲ್ಲಿ ಬಲವಂತವಾಗಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.
ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ POSCO ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.