ಸಾಂದರ್ಭಿಕ ಚಿತ್ರ- ಡಿ.ಕೆ ಶಿವಕುಮಾರ್ 
ಪ್ರಧಾನ ಸುದ್ದಿ

ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯಲ್ಲಿ ಲೋಡ್‌ಶೆಡ್ಡಿಂಗ್ ಇರುವುದಿಲ್ಲ. ಯಾವುದೇ ರೀತಿಯಲ್ಲಿ ಕಲ್ಲಿದ್ದಲು ಸೇರಿದಂತೆ ಇತರೆ ಸಂಕಷ್ಟ ಉಂಟಾದರೂ ಅದನ್ನು ನಿರ್ವಹಿಸಲು ಸರ್ಕಾರ ಸಕಲ ಸಿದ್ಥತೆ ಮಾಡಿಕೊಂಡಿದೆ. ಅಲ್ಲದೆ ಈಗಿರುವ ಲೋಡ್ ಶೆಡ್ಡಿಂಗ್ ಅನ್ನೂ ನಿಲ್ಲಿಸಲಾಗುತ್ತದೆ.

ಹೀಗೆಂದು ಇಂಧನ ಸಚಿವ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಸಚಿವರು ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಮಾಡದಿರಲು ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ವಿದ್ಯುತ್ ಗ್ರಿಡ್‌ನಿಂದ ವಿದ್ಯುತ್ ನಿಲುಗಡೆ ಹಾಗೂ ಉಷ್ಣವಿದ್ಯುತ್ ಸ್ಥಾವರಗಳಲ್ಲಿನ ತಾಂತ್ರಿಕ ದೋಷದಿಂದ ಕೆಲವು ದಿನಗಳ ಹಿಂದೆ ಲೋಡ್‌ಶೆಡ್ಡಿಂಗ್ ಜಾರಿ ಮಾಡಲಾಗಿತ್ತು. ಆದರೆ, ಈಗ ಪರಿಸ್ಥಿತಿ ಸುಧಾರಣೆಯಾಗಿದ್ದು, ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ. ಹಿಂದಿನ ರೀತಿಯಲ್ಲೇ ಗ್ರಾಮೀಣ ಪ್ರದೇಶಗಳಿಗೆ 6 ಗಂಟೆ ಸಿಂಗಲ್ ಫೇಸ್, 6 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ನಗರ ಪ್ರದೇಶದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ ಎಂದು ತಿಳಿಸಿದರು.

ಕಲ್ಲಿದ್ದಲು ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರದೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಸುಪ್ರೀಂಕೋರ್ಟ್ ಆದೇಶದಂತೆ ಪ್ರತಿ ಮೆಟ್ರಿಕ್ ಟನ್ ಕಲ್ಲಿದ್ದಲಿಗೆ ರು. 295 ತೆರಿಗೆ ಪಾವತಿಯಲು ಸಾಧ್ಯವಿಲ್ಲ. ಕಲ್ಲಿದ್ದಲಿಗೆ ರಾಜ್ಯ ಸರ್ಕಾರ ಮಾರಾಟ ಮಾಡುತ್ತಿಲ್ಲ. ವಿದ್ಯುತ್ ಉತ್ಪಾದನೆಗೆ ಬಳಕೆ ಮಾಡುತ್ತಿರುವುದರಿಂದ ತೆರಿಗೆ ಪಾವತಿಸುವುದಿಲ್ಲ ಎಂದು ಮನವರಿಕೆ ಮಾಡಲಾಗಿದೆ ಎಂದು ಹೇಳಿದರು.

ಕೈಗಾರಿಕೆಗಳಿಗೆ ವಿದ್ಯುತ್: ಕೈಗಾರಿಕೆಗಳಿಗೆ 24 ಗಂಟೆಯೂ ವಿದ್ಯುತ್ ಪೂರೈಕೆ ಮಾಡಲು ಸರ್ಕಾರ ಬದ್ಧ. ವಿದ್ಯುತ್ ಸಮಸ್ಯೆಯಿಂದ ಕೈಗಾರಿಕೆಗಳು ಹೊರ ರಾಜ್ಯಕ್ಕೆ ಹೋಗುತ್ತಿದೆ ಎಂಬುದು ಸತ್ಯಕ್ಕೆ ದೂರವಾದ ವಿಷಯ. ದೇಶದ ಇತರ ಯಾವುದೇ ರಾಜ್ಯಕ್ಕಿಂತಲೂ ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!