ಸಾಂದರ್ಭಿಕ ಚಿತ್ರ- ಕಪ್ಪುಹಣ 
ಪ್ರಧಾನ ಸುದ್ದಿ

ಕಪ್ಪುಹಣ ಮಾಹಿತಿ ಇದ್ದರೆ ನಮಗೆ ದಯವಿಟ್ಟು ಕೊಡಿ!

ನವದೆಹಲಿ: ಕಪ್ಪುಹಣ ಖಾತೆದಾರರ ಬಗ್ಗೆ ನಿಮ್ಮಲ್ಲೇನಾದರೂ ಮಾಹಿತಿಯಿದೆಯೇ? ಹಾಗಿದ್ದರೆ ನಮಗೆ ಕೊಟ್ಟುಬಿಡಿ.

ಇದು ಕಪ್ಪುಹಣದ ತನಿಖೆಗಾಗಿ ನೇಮಕಗೊಂಡಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ವು ಹೊರಡಿಸಿದ ಸಾರ್ವಜನಿಕ ಪ್ರಕಟಣೆ. ತೆರಿಗೆ ತಪ್ಪಿಸಿ ವಿದೇಶಿ ಬ್ಯಾಂಕುಗಳಲ್ಲಿ ಇಡಲಾಗಿರುವ ಕಪ್ಪುಹಣವನ್ನು ವಾಪಸ್ ತರಲು ಕಸರತ್ತು ನಡೆಸುತ್ತಿರುವ ಎಸ್‌ಐಟಿ ಈಗ ತನ್ನ ಕಾರ್ಯಕ್ಕೆ ಸಾರ್ವಜನಿಕರ ನೆರವನ್ನೂ ಯಾಚಿಸಿದೆ.

ಯಾವುದೇ ಭಾರತೀಯ ವ್ಯಕ್ತಿ ಅಥವಾ ಸಂಸ್ಥೆಗಳು ವಿದೇಶಿ ಬ್ಯಾಂಕುಗಳಲ್ಲಿ ಕಪ್ಪುಹಣ ಇಟ್ಟಿರುವ ಬಗ್ಗೆ, ಅಕ್ರಮ ಆಸ್ತಿ, ಬ್ಯಾಂಕ್ ಖಾತೆ ಹೊಂದಿರುವ ಬಗ್ಗೆ ಯಾರಿಗಾದರೂ ನಿಖರ ಮಾಹಿತಿಯಿದ್ದರೆ ತಕ್ಷಣ ಅದನ್ನು ನಮಗೆ ತಿಳಿಸಿ. ನಿಮ್ಮ ಹೆರಸನ್ನು ಗೌಪ್ಯವಾಗಿಡಲಾಗುವುದು ಎಂದು ಸಾರ್ವಜನಿಕರಿಗೆ ಎಸ್‌ಐಟಿ ಮನವಿ ಮಾಡಿದೆ.

ಸಾರ್ವಜನಿಕರು ಕಪ್ಪುಹಣದ ಮಾಹಿತಿಯನ್ನು ಜಂಟಿ ಕಾರ್ಯದರ್ಶಿ, ಕಂದಾಯ ಇಲಾಖೆ, ನಾರ್ತ್ ಬ್ಲಾಕ್ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬಹುದು ಅಥವಾ "sit-rev@nic.in' ಎಂಬ ಇ-ಮೇಲ್ ವಿಳಾಸಕ್ಕೆ ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ, ಪಾಸ್‌ಪೋರ್ಟ್ ವಿವರ, ಶಂಕಿತ ವ್ಯಕ್ತಿಯ ಅಕ್ರಮ ಆಸ್ತಿಯ ವಿವರ ಮತ್ತು ದಾಖಲೆಗಳನ್ನು ಕಳುಹಿಸಬಹುದು ಎಂದೂ ತನಿಖಾ ತಂಡ ತಿಳಿಸಿದೆ. ವಿದೇಶಗಳಲ್ಲಿ ಅಕ್ರಮ ಆಸ್ತಿ ಇಟ್ಟಿರುವ ಬಗ್ಗೆ ನಿರ್ದಿಷ್ಟ ಮಾಹಿತಿ ಲಭ್ಯವಾದರೆ ಕೂಡಲೇ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಉಪಾಧ್ಯಕ್ಷ, ನಿವೃತ್ತ ನ್ಯಾಯಮೂರ್ತಿ ಅರಿಜಿತ್ ಪಸಾಯತ್ ಈ ಹಿಂದೆಯೇ ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT