ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ ಅಬ್ದುಲ್ ಕಲಾಮ್ ಅಜಾದ್ ಅವರ ಜನ್ಮ ದಿನದ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಧೀಮಂತ ನಾಯಕನನ್ನು ಸ್ಮರಿಸಿದ್ದಾರೆ.
"ವಿದ್ವಾಂಸ, ಸ್ವಾತಂತ್ರ್ಯ ಹೋರಾಟಗಾರನಾಗಿದ್ದು ದೇಶದ ಏಳಿಗೆಗಾಗಿ ತನ್ನ ಜೀವನವನ್ನೇ ಮುಡುಪಿಟ್ಟ ಮೌಲಾನಾ ಅಬ್ದುಲ್ ಕಲಾಮ್ ಅಜಾದ್ ಅವರ ಜನ್ಮ ವಾರ್ಷಿಕೋತ್ಸವದ ಇಂದು ಅವರಿಗೆ ನನ್ನ ಸಲಾಂ" ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.