ಬಿಜೆಪಿ ಬೆಂಬಲಿಗರು (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಜಾರ್ಖಂಡ್ ಮತ್ತು ಜಮ್ಮು ಕಾಶ್ಮೀರದಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತವಿಲ್ಲ: ಸಮೀಕ್ಷೆ

ಜಾರ್ಖಂಡಲ್ಲಿ ಬಿಜೆಪಿ ಪಕ್ಷ ಬಹುಮತಕ್ಕೆ ಸಣ್ಣ ಅಂತರದಲ್ಲಿ ವಂಚಿತಗೊಳ್ಳಬಹುದು ...

ನವದೆಹಲಿ: ಜಾರ್ಖಂಡಲ್ಲಿ ಬಿಜೆಪಿ ಪಕ್ಷ ಬಹುಮತಕ್ಕೆ ಸಣ್ಣ ಅಂತರದಲ್ಲಿ ವಂಚಿತಗೊಳ್ಳಬಹುದು ಹಾಗೂ ಜಮ್ಮು ಕಾಶ್ಮೀರದಲ್ಲಿ ಸದರಿ ವಿರೋಧಿ ಪಕ್ಷ ಪೀಪಲ್ಸ್ ಡೆಮಾಕ್ರಾಟಿಕ್ ಪಕ್ಷ (ಪಿಡಿಪಿ) ಹೆಚ್ಚು ಸ್ಥಾನಗಳನ್ನು ಗೆಲ್ಲುವ ಪಕ್ಷವಾಗಿ ಹೊರಹೊಮ್ಮಬಹುದು ಎಂದು ಚುನಾವಣಾಪೂರ್ವ ಸಮೀಕ್ಷೆಯೊಂದು ಬಿಂಬಿಸಿದೆ.

ಸಮೀಕ್ಷೆಯ ಪ್ರಕಾರ ೮೧ ಸ್ಥಾನಗಳ ಜಾರ್ಕಂಡದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ೨೯ ರಿಂದ ೩೫ ಸ್ಥಾನ ಗಳಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಜೆ ಎಂ ಎಂ ೧೭ ರಿಂದ ೨೩ ಸ್ಥಾನಗಳನ್ನು ಹಾಗು ಕಾಂಗ್ರೆಸ್ ೭ ರಿಂದ ೧೩ ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆ ತಿಳಿಸುತ್ತದೆ.

ಜಮ್ಮು ಕಾಶ್ಮೀರದಲ್ಲಿ ೮೭ ಸ್ಥಾನಗಳಲ್ಲಿ ಪಿಡಿಪಿ ೨೭ ರಿಂದ ೩೩ ಸ್ಥಾನ ಗೆಲ್ಲಬಹುದು ಎಂದು ತಿಳಿಸಿರುವ ಇಂಡಿಯಾ ಟಿವಿ - ಸಿ ವೋಟರ್ ಸಮೀಕ್ಷೆ ಆಶ್ಚರ್ಯಕರ ಸನ್ನಿವೇಶದಲ್ಲಿ ಬಿಜೆಪಿ ೨೩ ರಿಂದ ೨೯ ಸ್ಥಾನಗಳನ್ನು ಗೆದ್ದು ಎರಡನೇ ಸ್ಥಾನ ಗಳಿಸಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಸ್ಥಾನಕ್ಕೆ ಪಿಡಿಪಿ ನಾಯಕಿ ಮುಫ್ತಿ ಮಹಮದ್ ಸಯದ್ ಅವರನ್ನು ಸಮೀಕ್ಷೆಯಲ್ಲಿ ಭಾಗವಹಿಸಿದ ೫೩% ಜನ ಆಯ್ಕೆ ಮಾಡಿದ್ದು, ಜಾರ್ಕಂಡದಲ್ಲಿ ಸದರಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ೪೧% ಬೆಂಬಲದೊಂದಿಗೆ ಮುಂಚೂಣಿಯಲ್ಲಿದ್ದಾರೆ ಎಂದು ಇಂಡಿಯಾ ಟಿ ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಎರಡೂ ರಾಜ್ಯಗಳ ಚುನಾವಣೆ ನವೆಂಬರ್ ೨೫ ರಿಂದ ಡಿಸೆಂಬರ್ ೨೦ ರೊಳಗೆ ೫ ಹಂತಗಳಲ್ಲಿ ನಡೆಯಲಿದ್ದು ಡಿಸೆಂಬರ್ ೨೩ ರಂದು ಮತ ಎಣಿಕೆಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!