ಸ್ವಚ್ಛ ಭಾರತ ಅಭಿಯಾನದಲ್ಲಿ ಕಸ ಗುಡಿಸುತ್ತಿರುವ ಪ್ರಧಾನಿ ಮೋದಿ 
ಪ್ರಧಾನ ಸುದ್ದಿ

ಸ್ವಚ್ಛ ಭಾರತ ಅಭಿಯಾನಕ್ಕೆ ಮಕ್ಕಳ ಬಳಕೆ: ಹೈಕೋರ್ಟ್ ನಲ್ಲಿ ಸಾರ್ವಜನಿಕ ಅರ್ಜಿ

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿರುವ ಸ್ವಚ್ಛ ಭಾರತ ಅಭಿಯಾನದಲ್ಲಿ ಶಾಲಾ...

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿರುವ ಸ್ವಚ್ಛ ಭಾರತ ಅಭಿಯಾನದಲ್ಲಿ ಶಾಲಾ ಮತ್ತು ಕಾಲೇಜು ಮಕ್ಕಳನ್ನು ದೇಶದ ಬೀದಿಗಳನ್ನು ಗುಡಿಸಲು ಹೊರಡಿಸಿರುವ ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ. ಆದರೆ ಈ ಅರ್ಜಿಯನ್ನು ಕೈಗೆತ್ತುಕೊಳ್ಳಲು ಕೋರ್ಟ್ ನಿರಾಕರಿಸಿದೆ.

ಅರ್ಜಿ ಸಲ್ಲಿಸಿರುವ ಮುಂಬೈ ನಗರದ ಲಾಯರ್ ಎಂ ವಿ ಹೊಳಮಗಿ ಅವರ ಪ್ರಕಾರ ನವೆಂಬರ್ ೧೪ ರಿಂದ ಏಳು ದಿನಗಳವರೆಗೆ ಶಾಲಾ ಮಕ್ಕಳು ಬೀದಿಗಳಲ್ಲಿ ಕಸ ಗುಡಿಸಲು ನಿರ್ದೇಶಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ರಾಜಕೀಯ ನಾಯಕರು ತಮ್ಮ ಸ್ವಹಿತಾಸಕ್ತಿಗಳಿಗೆ ಮಕ್ಕಳನ್ನು ಬಳಸಿಕೊಳ್ಳುವುದು ಕಾನೂನು ಬಾಹಿರ ಎಂದಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಜೊತೆ ಆ ಸುತ್ತೋಲೆಯ ಪ್ರತಿಯನ್ನು ಲಗ್ಗತ್ತಿಸದೇ ಹೋದದ್ದರಿಂದ ಅನೂಪ್ ಮೊಹೊತ ಮತ್ತು ನಿತಿನ್ ಜಾಮ್ದಾರ್ ಒಳಗೊಂಡ ವಿಭಾಗೀಯ ಪೀಠ "ಸಾರ್ವಜನಿಕ ಅರ್ಜಿ ವಿಚಾರಣಾ ವೇಳೆಗೆ ಸಂಪೂರ್ಣ ಸಿದ್ಧತೆಯಿಂದ ಬರಬೇಕು" ಎಂದಿರುವ ನ್ಯಾಯಾಧೀಶರುಗಳು, ಸುತ್ತೋಲೆಯ ಪ್ರತಿಯನ್ನು ಹುಡುಕಿ ಅರ್ಜಿಗೆ ಲಗತ್ತಿಸಿ ಮತ್ತೆ ಬರುವಂತೆ ಸೂಚಿಸಿದ್ದಾರೆ.

"ಸುತ್ತೋಲೆಯ ಪ್ರತಿಯನ್ನು ಹುಡುಕಿ ಸಂಪಾದಿಸಿ ಮುಂದಿನ ವಾರ ಮತ್ತೆ ಕೋರ್ಟ್ ಗೆ ಹೋಗುತ್ತೇನೆ" ಎಂದಿದ್ದಾರೆ ಹೊಳಮಗಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!