ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ 
ಪ್ರಧಾನ ಸುದ್ದಿ

೩೭೦ನೆ ವಿಧಿಯನ್ನು ಚುನಾವಣಾ ವಿಷಯವನ್ನಾಗಿಸುವುದಿಲ್ಲ: ರಾಜನಾಥ್

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ ೩೭೦ನೆ ವಿಧಿಯನ್ನು ವಜಾ ...

ನವದೆಹಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ ೩೭೦ನೆ ವಿಧಿಯನ್ನು ವಜಾ ಮಾಡುವ ವಿಷಯವನ್ನು ಜಮ್ಮು ಕಾಶ್ಮೀರದ ಚುನಾವಣಾ ವಿಷಯವಾಗಿ ಚರ್ಚಿಸುವುದಿಲ್ಲ ಎಂದಿದ್ದಾರೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್. ಅಲ್ಲದೆ ಜನರಲ್ಲಿ ಭಯಭೀತಿ ಹುಟ್ಟಿಸಲು ವಿರೋಧ ಪಕ್ಷಗಳು ಈ ವಿಷಯವನ್ನು ಎತ್ತುತಿವೆ ಎಂದಿದ್ದಾರೆ.

"ಜಮ್ಮು ಕಾಶ್ಮೀರದಲ್ಲಿ ಚುನಾವಣೆ ಹತ್ತಿರದಲ್ಲಿದ್ದಾಗ ಜನರ ಮನಸ್ಸಿನಲ್ಲಿ ಭೀತಿ ಹುಟ್ಟಿಸಲು ವಿರೋಧ ಪಕ್ಷಗಳು ಪ್ರಯತ್ನಿಸುತ್ತಿವೆ. ವಿಧಾನಸಭಾ ಚುನಾವಣಾ ವೇಳೆಯಲ್ಲಿ ಈ ವಿಷಯವನ್ನು (ಸಂವಿಧಾನದ ೩೭೦ನೆ ವಿಧಿ) ಏಕೆ ಎತ್ತುತ್ತೀರ? ವಿಧಾನ ಸಭಾ ಚುನಾವಣೆಗಳಲ್ಲಿ ಉತ್ತಮ ಆಡಳಿತ, ಅಭಿವೃದ್ಧಿ ವಿಷಯಗಳು ಚರ್ಚೆಯಾಗಬೇಕು" ಎಂದು ಹಿಂದೂಸ್ತಾನ್ ಲೀಡರ್ ಶಿಪ್ ಸಭೆಯಲ್ಲಿ ಹೇಳಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಪ್ರತಿಯೊಂದು ವಿಷಯಗಳ ಬಗ್ಗೆ ಚರ್ಚೆಯಾಗಬೇಕೆಂದ ಸಿಂಗ್, ಈ ವಿಷಯ ಕೂಡ ರಾಜ್ಯಾದ್ಯಂತ ಹಾಗೂ ದೇಶಾದ್ಯಂತ ಚರ್ಚೆಯಾಗಬೇಕಿದೆ ಎಂದಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಭಧ್ರತಾ ಪಡೆಗಳ ವಿಶೇಷ ಅಧಿಕಾರ ನೀತಿಯನ್ನು (ಎ ಅಫ್ ಎಸ್  ಪಿ ಎ) ಹಂತಹಂತವಾಗಿ ಹಿಂಪಡೆಯುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ, ಅಂತಹ ಯಾವುದೇ ನಿರ್ಧಾರವನ್ನು ನಾವಿನ್ನೂ ತೆಗೆದುಕೊಂಡಿಲ್ಲ. ಎನ್ ಡಿ ಎ ಸರ್ಕಾರ ಜಮ್ಮು ಕಾಶ್ಮೀರದ ಪರಿಸ್ಥಿತಿಯನ್ನು ಇನ್ನೂ ಗಮನಿಸಲಿದೆ ಮತ್ತು ಕಾಯಲಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?