ಅಮಿತ್ ಷಾ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಕೋಲ್ಕತ್ತದಲ್ಲಿ ಚುನಾವಣಾ ಪ್ರಚಾರಸಭೆ ಸಡೆಸಲು ಅಮಿತ್ ಷಾಗೆ ಅನುಮತಿ ನಿರಾಕರಣೆ

ನವೆಂಬರ್ ೩೦ ರಂದು ಕೋಲ್ಕತ್ತಾದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಚುನಾವಣಾ ಪ್ರಚಾರ ಸಭೆ ನಡೆಸಲು...

ಕೋಲ್ಕತ್ತಾ: ನವೆಂಬರ್ ೩೦ ರಂದು ಕೋಲ್ಕತ್ತಾದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಚುನಾವಣಾ ಪ್ರಚಾರ ಸಭೆ ನಡೆಸಲು ನಗರ ಸಭೆ ಅನುಮತಿ ನಿರಾಕರಿಸಿದೆ.

ಸಾಮಾನ್ಯವಾಗಿ ತೃಣಮೂಲ ಕಾಂಗ್ರೆಸ್ ಪಕ್ಷ ಜುಲೈ ೨೧ ರಂದು ಹುತಾತ್ಮರ  ದಿನಾಚರಣೆ ನಡೆಸುವ ವಿಕ್ಟೊರಿಯಾ ಹೌಸ್ ನಲ್ಲೆ ಪ್ರಚಾರ ಸಭೆಗೆ ಬಿಜೆಪಿ ಅನುಮತಿ ಕೋರಿತ್ತು. ವಾಹನ ದಟ್ಟಣೆ ಮತ್ತು ಕಾನೂನು ಸುವ್ಯವಸ್ಥೆಯ ಕಾರಣ ಹೇಳಿ ಪೊಲೀಸರು ಅನುಮತಿ ನಿರಾಕರಿಸಿದ್ದರು.

ಜುಲೈ ನಲ್ಲೆ ಅನುಮತಿಗೆ ಕೋರಿದ್ದ ಬಿಜೆಪಿ, ನವೆಂಬರ್ ೩೦ ಭಾನುವಾರವಾಗಿದ್ದು ಪೊಲೀಸರು ನೀಡಿರುವ ಕಾರಣ ಸಮರ್ಪಕವಾಗಿಲ್ಲ ಎಂದು, ಕೋಲ್ಕತ್ತ ಉಚ್ಛ ನ್ಯಾಯಾಲಯದಲ್ಲಿ ಈ ನಿರ್ಧಾರವನ್ನು ಪ್ರಶ್ನಿಸಿತ್ತು. ಆದರೆ ನ್ಯಾಯಾಲಯ ನಗರ ಸಭೆ ಮತ್ತು ಪ್ರಾದೇಶಿಕ ಅಗ್ನಿ ಸುರಕ್ಷತಾ ಅಧಿಕಾರಿಗಳಿಂದ ಪರವಾನಗಿ ಪಡೆಯುವಂತೆ ಸೂಚಿಸಿತ್ತು.

ಈಗ ಇದೇ ಕಾರಣಗಳಿಗೆ ಕಲ್ಕತ್ತಾ ನಗರ ಸಭೆ ಅನುಮತಿ ನಿರಾಕರಿಸಿದ್ದು ಬಿಜೆಪಿ ಪಾಳಯದಲ್ಲಿ ಆಕ್ರೋಶ ಸೃಷ್ಟಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ